ಗಡ್ಡ ಧಾರಿ ನಲ್ಲ
ಗಡ್ಡ ಧಾರಿ ನಲ್ಲ ಪಿಯುಸಿಯಲ್ಲಿದ್ದಾಗ ಇರಬೇಕು ನನ್ನ ಗಡ್ಡ ಚಿಗುರತೊಡಗಿತ್ತು. ಹಾಲುಗೆನ್ನೆಯ ಮೇಲೆ ಅಲ್ಲೊಂದು ಇಲ್ಲೊಂದು ಕೂದಲು. ನುಣುಪಾದ ಕಲ್ಲಿನ ಮೇಲಿನ ಪಾಚಿಯಂತೆ. ಮೀಸೆ ಚಿಗುರಿದ ಸ್ವಲ್ಪ ದಿನಗಳಲ್ಲೇ ಗಡ್ಡವೂ ಚಿಗುರತೊಡಗಿತಲ್ಲ, ಶುರುವಾಯಿತು ಪೀಕಲಾಟ. ಒಂದು ಕಡೆ ನಾನು ಗಂಡಸಾಗುತ್ತಿದ್ದೀನಲ್ಲ ಎಂಬ ಹರ್ಷ. ಮತ್ತೊಂದೆಡೆ ನಯವಾದ ಕೆನ್ನೆಗಳು ಒರಟಾಗುತ್ತವಲ್ಲ ಎಂಬ ಯೋಚನೆ. ಯಾವುದೇ ಕಾರಣಕ್ಕೂ ಜೀವನದಲ್ಲಿ ಗಡ್ಡ ಬಿಡಬಾರದು, ಯಾವಾಗಲೂ ನೀಟಾಗಿ ಶೇವ್ಮಾಎಡಿಕೊಂಡು ಮೀಸೆ ಇರುವ ಅನಂತ್ನಾಕಗ್ನಂ್ತೆ ಕಾಣುವ ಆಸೆ ಮೊದಲಿನಿಂದಲೂ ಮನದಲ್ಲಿತ್ತು. ಬಯಲುದಾರಿಯ ಸುರಸುಂದರಾಂಗ ಅನಂತ್ ನೀಟಾಗಿ ಶೇವ್ ಮಾಡಿಕೊಂಡು ಅದೆಷ್ಟು ಸುಂದರವಾಗಿ ಕಾಣುತ್ತಿದ್ದ. ಆಗ ಆತನಿಗೆ ಮೀಸೆ ಇದ್ದರೆ ಇನ್ನೂ ಚೆನ್ನಾಗಿ ಕಾಣುತ್ತಿದ್ದನೆನೋ? ಗಡ್ಡ ಚಿಗುರಿದ ಮೇಲೆ ಹೇರ್ ಕಟಿಂಗ್ ಮಾಡುವವರ (ನಾನು ಅವರನ್ನು ಹಜಾಮನೆನ್ನುವುದಿಲ್ಲ) ಬಳಿ ಹೋದಾಗ ಬಹಳ ಭಯ ಶುರುವಾಗಿತ್ತು. ಅವರೇನಾದರೂ ಹೊಚ್ಚ ಹೊಸ ಬ್ಲೇಡನ್ನು ತಮ್ಮ ಕತ್ತಿಗೆ ಸಿಲುಕಿಸಿಕೊಂಡು ಕೆನ್ನೆಗೆ ಬುರ ಬುರ ನೊರೆಹಚ್ಚಿ ಪರಪರ ಕೆರೆದರೆ ಎಂಬ ಭಯ. ಅಂದು ಹೇರ್ ಕಟಿಂಗ್ ಆದ ನಂತರ ಅವರೇ “ನಿನಗೆ ಈಗಲೇ ಶೇವ್ ಮಾಡುವುದಿಲ್ಲ. ಟ್ರಿಮ್ ಮೇಷಿನ್ನಿಂ ದ ಗಡ್ಡವನ್ನು ಟ್ರಿಮ್ ಮಾಡುತ್ತೇನೆ. ಚೆನ್ನಾಗಿ ಬೆಳೆಯುವವರೆಗೆ ಎಲ್ಲೂ ಶೇವ್ ಮಾಡಿಸಬೇಡಿ” ಎಂದರು. ನನ್ನ ಭಯಕ್ಕಿಂತ ಮುಖ್ಯವಾಗಿ ನಮ್ಮಂಥ ಯುವಕರ ಮುಖ ಬೇಗ ಹಾಳಾಗದಿರಲಿ