ಹೈಕುಗಳು ಮತ್ತು ಮನೋಜ
ನನಗೆ ಮೊದಲಿಗೆ ಹೈಕುಗಳು ಪರಿಚಯವಾಗಿದ್ದು ತುಮಕೂರಿನ ಗ್ರಂಥಾಲಯದಲ್ಲಿ ದೊರೆತ ಅಂಕುರ್ ಬೆಟಗೆರಿಯವರ ‘ ಹಳದಿ ಪುಸ್ತಕ ’ ದ ಮೂಲಕ. ಆ ಪುಸ್ತಕದ ಮೂಲಕ ನನಗೆ ಹೈಕುಗಳ ಪ್ರಾಥಮಿಕ ಮಾಹಿತಿ ದೊರೆಯಿತಾದರೂ ನನಗೆ ಹೈಕುಗಳನ್ನು ಬರೆಯಬೇಕು ಎಂದೆನಿಸಲಿಲ್ಲ. ಆದರೆ, ಸುಮಾರು ಅದೇ ಸಮಯದಲ್ಲಿ ಒಂದು ದಿನ ನಾನು ವೃತ್ತಿಯಲ್ಲಿ ವೈದ್ಯರಾದ ನನ್ನ ಹಿರಿಯ ಮಿತ್ರರಾದ ಡಾ|| ಕೆ.ಬಿ. ರಂಗಸ್ವಾಮಿಯವರ ಕ್ಲಿನಿಕ್ಕಿಗೆ ಹೋಗಿದ್ದೆ. ಅವರ ‘ ಗರಿಕೆ ’ ಪುಸ್ತಕದ ಹನಿಗವಿತೆಗಳನ್ನು ಬಹಳವಾಗಿ ಮೆಚ್ಚಿದ್ದ ನಾನು ಅವರ ಪುಸ್ತಕವೊಂದನ್ನು ಪ್ರಕಟಿಸುವ ಆಸೆ ವ್ಯಕ್ತಪಡಸಿದೆ. ಆಗ ಅವರು ಬೆಳದಿಂಗಳ ಹೈಕುಗಳನ್ನು ಕುರಿತು ಹೇಳಿದರು. ಅಲ್ಲಿಯೇ ಕೆಲವನ್ನು ಓದಿದ ನಾನು ಮತ್ತು ನನ್ನ ಶ್ರೀಮತಿ ಆಶ್ಚರ್ಯಚಕಿತರಾದೆವು. ನಾನು ಅದೇ ಪುಸ್ತಕವನ್ನು ಪ್ರಕಟಿಸುವುದಾಗಿ ಅವರಿಂದ ಅನುಮತಿ ಪಡೆದೆ. ಅವರು ಅದರ ಜೊತೆಜೊತೆಯೇ ಅವರದೇ ಸಮೃದ್ಧ ಪ್ರಕಾಶನದ ಮೂಲಕ ‘ ಗರಿಕೆ ’ ಯ ಮುಂದುವರೆದ ಭಾಗದಂತಿರುವ ‘ ಕವಿತೆಗಷ್ಟೇ ಸಾಧ್ಯ ’ ಪುಸ್ತಕವನ್ನು ಪ್ರಕಟಿಸುವುದಾಗಿ ಹೇಳಿದರು. ಈ ಬೆಳದಿಂಗಳ ಹೈಕುಗಳನ್ನು ನಾನು ನನ್ನ ಸಹೋದ್ಯೋಗಿ ಕವಿಮಿತ್ರ ಮನೋಜನಲ್ಲಿ ಹಂಚಿಕೊಂಡಾಗ ಅಂದೇ ಅವನ ಕಣ್ಣುಗಳಲ್ಲಿ ಕುತೂಹಲಭರಿತ ಮಿಂಚೊಂದು ಹರಿದಿತ್ತು. ಅಂದಿನಿಂದ ಆತ ನಮ್ಮ ಗೋಮಿನಿ ಪ್ರಕಾಶನದಲ್ಲಿ ‘ ಬೆಳದಿಂಗಳ ಹೈಕುಗಳು ’ ಪುಸ್ತಕ ಪ್ರಕಟವಾಗಿ ಬಿಡುಗಡೆಯಾಗುವ ಕ್ಷಣವನ್ನು ಕಣ್ಣಲ್ಲಿ ಎಣ
ನಮಸ್ಕಾರ,
ಪ್ರತ್ಯುತ್ತರಅಳಿಸಿI am Basavaraj Kanthi. I have a ebook publishing website where you can publish your writings. With online publishing you can reach more number of readers. Also you can decide price of books yourself. Contact me for more details.
email: kanthibasu@gmail.com
Thanks,
Basavaraj