ಒಂದನೇ ಕ್ಲಾಸ್ ಇಂಗ್ಲೀಷ್ ಡೈಜೆಸ್ಟ್
ಸಂಜೆಯಾಯಿತೆಂದರೆ ತುಮಕೂರಿನ ಎಂ.ಜಿ. ರೋಡಿನಲ್ಲಿ ವಾಹನಗಳಿಂದವಿರಲಿ, ಜನಗಳಿಂದಲೇ ಆಗುವ ತಿಕ್ಕಾಟವನ್ನು ತಪ್ಪಿಸಿಕೊಂಡು ನಡೆಯುವುದು ಕಷ್ಟ. ನನಗೆ ಡ್ರಾಯಿಂಗ್ ಶೀಟ್ಸ್‍ಗಳನ್ನು ತೆಗೆದುಕೊಳ್ಳಬೇಕು. ಅಷ್ಟಕ್ಕೂ ಅದು ನನಗಲ್ಲ. ನನ್ನ ಏಕೈಕ ಹೆಂಡತಿಗೆ. ನೆನ್ನೆ ರಾತ್ರಿಯೇ ಇದರ ಬಗ್ಗೆ ಅವಳು ಹೇಳಿದ್ದಳು. ಸಂಜೆ ಫೋನ್ ಮೂಲಕ ಮತ್ತೊಮ್ಮೆ ಜ್ಞಾಪಿಸಿದ್ದಾಳೆ ಎಂದ ಮೇಲೆ ತೆಗೆದುಕೊಂಡು ಹೋಗಲೇಬೇಕು. ಗಾಡಿ ಪಾರ್ಕ್ ಮಾಡಿ, ಯಾರಿಗೂ ತಿಕ್ಕದೆ, ತಿಕ್ಕಿಸಿಕೊಳ್ಳದೆ ಪುಸ್ತಕದಂಗಡಿಯ ಬಾಗಿಲ ಬಳಿಗೆ ಬಂದೆ. ಅಂಗಡಿಯ ಮುಂದೆ ಹಲವಾರು ಜನ ವ್ಯಾಪಾರ ಮಾಡುತ್ತಿದ್ದರು. ನಾ ಮೊದಲು ಎಡಗಡೆಗೆ ನಿಂತೆ. ಕಾರಣ, ಬಲಗಡೆ ಹುಡುಗಿಯರು ಹೆಚ್ಚಿದ್ದರು. ಎಡಗಡೆ ಇಬ್ಬರು ಹುಡುಗರಿದ್ದರು. ನಾ ತುಂಬಾ ಹೊತ್ತು ಅಲ್ಲಿನ ಚಲನವಲನಗಳನ್ನು ಗಮನಿಸುತ್ತಾ ನಿಂತೇ ಇದ್ದೆ. ನನ್ನ ಕಡೆಯಿದ್ದ ಆ ಹುಡುಗರು ಬೇಗ ವ್ಯಾಪಾರ ಮುಗಿಸಲೇ ಇಲ್ಲ. ಅಷ್ಟರಲ್ಲಿ ಬಲಗಡೆಯಿದ್ದ ಹುಡುಗಿಯೊಬ್ಬಳು ವ್ಯಾಪಾರ ಮುಗಿಸಿ ಅಲ್ಲಿಂದ ತೆರಳಿದಳು. ನಾನು ಆ ಜಾಗಕ್ಕೆ ಹೋಗಬೇಕೆನ್ನುವಷ್ಟರಲ್ಲಿ ಮಧ್ಯವಯಸ್ಕ ಗಂಡಸರೊಬ್ಬರು ಪುಸಕ್ಕನೆ ಬಂದು ನಿಂತರು. ನಿರಾಸೆಯಾಯಿತು. ಅಂಗಡಿಯಲ್ಲಿ ಇಬ್ಬರು ಕೆಲಸದ ಹುಡುಗರೊಂದಿಗೆ ಅಂಗಡಿಯ ಯಜಮಾನರಿದ್ದರೂ ಗಿರಾಕಿಗಳನ್ನು ಸಂಭಾಳಿಸಲಾಗುತ್ತಿರಲಿಲ್ಲ. ಅಷ್ಟರಲ್ಲಿ ಎಡಗಡೆಯಿದ್ದ ಆ ಇಬ್ಬರು ಹುಡುಗರೂ, ಮತ್ತೊಬ್ಬಳು ಹುಡುಗಿ ನಿರ್ಗಮಿಸಿದರು. ಖಾಲಿಯಾದ ಜಾಗಕ್ಕೆ ಎತ್ತರದಿಂದ ಕೆಳಕ್ಕ