ಪೋಸ್ಟ್‌ಗಳು

ಜುಲೈ, 2011 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಗಾಳಿಪಟದ ಬಾಲ ಎನ್ನ ಮನ.

“ಚಿಕ್ಕವಸ್ತುಗಳನ್ನು ಕಡೆಗಣಿಸಬೇಡಿ, ಗಾಳಿಪಟ ಹಾರುವುದು ಅದರ ಬಾಲದಿಂದಲೇ”.                                                                                     - ಹವೈನ್ ಗಾದೆ. ಆಷಾಢವೆಂಬ ಗಾಳಿಮಾಸ ಶುರುವಾಗುತ್ತಿರುವ ಮುನ್ಸೂಚನೆ ನಮಗೆಲ್ಲಾ ಸ್ವಲ್ಪ ದಿನಗಳ ಮುಂಚೆಯೇ ಸಿಗುತ್ತಿತ್ತು. ಶಾಲೆಯಿಂದ ಹೊರಟಾಗಲೇ ಸುಯ್ ಎಂದು ಬೀಸುತ್ತಿದ್ದ ಗಾಳಿ ನಮ್ಮನ್ನೆಲ್ಲಾ ಒಂದೇ ಬಾರಿ ಮನೆಯ ಹತ್ತಿರಕ್ಕೆ ಹೊತ್ತಯ್ಯಬಾರದೇ ಎಂಬ ಆಸೆ ಇಣುಕುತ್ತಿತ್ತು. ಮೋಡ ಕವಿದ ವಾತಾವರಣ, ಇದ್ದಕ್ಕಿದ್ದಂತೆ ಯಾವ ಆರ್ಭಟವೂ ಇಲ್ಲದೆ ಸುರಿಯುತ್ತಿದ್ದ ಮಳೆ, ದೇಹ ಮತ್ತು ಮನಸ್ಸು ಎರಡನ್ನೂ ತಂಪಾಗಿಸುತ್ತಿದ್ದ ತಂಗಾಳಿ ಬೆಚ್ಚನೆಯ ಮುದ ಕೊಡುತ್ತಿತ್ತು. ಆ ದಿನಗಳಲ್ಲಿ ಶನಿವಾರದ ಮಾರ್ನಿಂಗ್ ಸ್ಕೂಲ್ ಮುಗಿಸಿಕೊಂಡು ನಾವೊಂದಷ್ಟು ಹುಡುಗರು ಮನೆಯಲ್ಲಿ ಕೊಟ್ಟ ಎನನ್ನಾದರೂ ತಿಂಡಿಯನ್ನು ತಿಂದುಕೊಂಡು ಮಧ್ಯಾಹ್ನದ ಹೊತ್ತಿಗೆ ನನ್ನ ಗುಬ್ಬಿ ಮನೆಯ ಎದುರಿಗಿದ್ದ ಹಿಟ್ಟಿನ ಗಿರಣಿಯ ಮಾಲೀಕರಾದ ಆದಿರಾಜುರವರಿಗೆ “ಆದಣ್ಣ...ಆದಪ್ಪಜ್ಜಿ...ಗಾಳಿಪಟ ಮಾಡಿಕೊಡಿ” ಎಂದು ದಂಬಾಲು ಬೀಳುತ್ತಿದ್ದೆವು. ನಮ್ಮ ಗುಂಪಿನ ಹುಡುಗರು ಅಷ್ಟೇನು ಸ್ಥಿತಿವಂತರಲ್ಲದ ಕಾರಣ ಸೇಠು ಅಂಗಡಿಗಳಲ್ಲಿ ಸಿಗುತ್ತಿದ್ದ ರೆಡಿಮೇಡ್ ಗಾಳಿಪಟವನ್ನು ಕೊಂಡುಕೊಳ್ಳಲು ಹಣವಿರುತ್ತಿರಲಿಲ್ಲ, ನಾವೆಲ್ಲಾ ಪ್ರೀತಿಯಿಂದ ಆದಣ್ಣನ ಕೈಹಿಡಿದು ಜಗ್ಗತೊಡಗಿದರೆ ಅವರೆಂದೂ ಇಲ್ಲ ಎಂದದ್ದೇ ಇಲ್ಲ. “ಬರ್ತೀನಿ ಕೈ