ಗಂಧರ್ವರಲ್ಲ, ಬುದ್ಧರಲ್ಲ, ಜೀವನಕ್ಕೆ ಬದ್ಧರಾದವರು.

ಖ್ಯಾತ ಚಲನಚಿತ್ರ ಸಾಹಿತಿ, ಕವಿರಾಜರ ಮುನ್ನುಡಿಯೊಂದಿಗೆ ಪ್ರಕಟವಾಗಿರುವ “ಭಾವಸಿಂಚನ” orkut ಕವಿತೆಗಳ ಸಂಕಲನ ಒಂದು ನವೀನ ಭಾವದ ಸಿಂಚನವಾಗಿದೆ. ಗೂಗಲ್ ನ ಆಕುರ್ಟ್ ಮೂಲಕ ಗೆಳೆಯರಾದ ಅನೇಕರ ಆಯ್ದ ಕವನಗಳ ಸಂಕಲನ ಇದಾಗಿದೆ. ಸಂಕಲನದ ಮೊದಲ ಕವಿತೆಯಾದ “ವಿನಿಮಯ...” ಕವನವು ನಾನಿರುವೆ ನಮ್ಮೂರಲ್ಲಿ / ನೀನೆಲ್ಲೋ ಪರದೇಶದಲ್ಲಿ / ಸುಡುವ ಬೆಳದಿಂಗಳ ಇರುಳು / ಬಿಗಿದು ಬಂದಿದೆ ಕೊರಳು / ಚಂದಿರನ ನೋಡೋಣವೇ / ಒಂದೇ ಸಮಯದಲ್ಲಿ ಇನಿಯ / ನಡೆಯಲಿ ಮುಗುಳುನಗೆಯ ವಿನಿಮಯ...” ಎಂದು ಆರಂಭಗೊಂಡು ನಂತರ ಮತ್ತಿಬ್ಬರು ಕವಿಗಳು ಅದನ್ನು ಚೆಂದವಾಗಿ ಮುಂದುವರಿಸಿದ್ದಾರೆ. ಕವನದ ಈ ಮೊದಲ ಸಾಲುಗಳೇ ಈ ಆಕುರ್ಟ್ ಸಮುದಾಯವನ್ನು ಪ್ರತಿಬಿಂಬಿಸುತ್ತಿವೆ. ಎಲ್ಲೋ ಹುಟ್ಟಿ ಎಲ್ಲೋ ಬೆಳೆದು ಅಂತರ್ಜಾಲದ ಮೂಲಕ ಗೆಳೆಯರಾಗಿರುವ ಇವರ ನೋವನ್ನು ಮತ್ತು ನಲಿವನ್ನು ಹೇಳುತ್ತಿವೆ. ಪ್ರೀತಿಪ್ರೇಮದ ಕವನಗಳೇ ಹೆಚ್ಚಾಗಿರುವ ಸಂಕಲನದಲ್ಲಿ ಅಮ್ಮನ ಬಗ್ಗೆಯೂ ಕವನವಿದೆ. ಕನ್ನಡಮ್ಮನ ಕುರಿತೂ ಕವನಗಳಿವೆ. ಅರುಣ್ ಕುಮಾರ್ ರವರ ಚಂದ್ರಸಾಕ್ಷಿ ಕವನವು ಪ್ರೇಮಿಗಳ ನೋವಿಗೆ, ಸಾಂತ್ವನಕ್ಕೆ ಚಂದ್ರನನ್ನು ಸಾಕ್ಷಿಯಾಗಿಸಿದ್ದರೆ, ಅರುಣ್ ಕುಮಾರ್ ಕೆ.ಕೆ. ಯವರ ಕವನ “ನೀರಿನಲ್ಲಿ ಅಲೆಯ ಉಂಗುರ” ಇದೇ ಹೆಸರಿನ ಜನಪ್ರಿಯ ಚಿತ್ರಗೀತೆಯ ಪ್ರಭಾವದಿಂದ ಬರೆದಿದ್ದಾಗಿದೆ. “ನಾನಿನ್ನು ಕವನ ಬರೆಯೋಲ್ಲ...” ಎನ್ನುವ ಮಹೇಶ್ ಮೂರ್ತಿಯವರ ಕವನವು ಮುನ್ನುಡಿಯಲ್ಲಿ ಕವಿರಾಜರು ಹೇಳಿರುವಂತೆ ಬಹುತೇಕ ಕವಿ