ಪೋಸ್ಟ್‌ಗಳು

ಜುಲೈ, 2012 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಉಪ್ಪಾರಹಳ್ಳಿಯ ರೈಲ್ವೆಗೇಟ್‍ನಲ್ಲೊಂದು ಕುಹೂ ಕುಹೂ

ಇಮೇಜ್
ಮಗ್ಗಿ ಪುಸ್ತಕದಲ್ಲಿರುತ್ತಿದ್ದ ಉಗಿಬಂಡಿಯಂತಹ ರೈಲಿನಲ್ಲೇ ಚಿಕ್ಕಂದಿನಿಂದ ಓಡಾಡುತ್ತಿದ್ದರೂ ನನಗೆ ಮೊದಲು ಅನುಭವಕ್ಕೆ ಬಂದ ರೈಲ್ವೇ ಗೇಟಿನ ನೆನಪೆಂದರೇ, ನಾಲ್ಕನೇ ತರಗತಿಯಲ್ಲಿದ್ದಾಗ ನನ್ನ ಸೋದರತ್ತೆ ಮನೆಯಿಂದ ಖುಷಿಯಿಂದಲೇ ರಜೆಯನ್ನು ಮುಗಿಸಿಕೊಂಡು ಹೊರಟವನು ತಲೆಯೆತ್ತಿಯೂ ನೋಡದೆ ನನ್ನದೇ ಲೋಕದಲ್ಲಿ ಆಡಿಕೊಳ್ಳುತ್ತಾ ಭೀಮಸಂದ್ರದ ರೈಲ್ವೇ ಗೇಟನ್ನು ದಾಟುವ ಸಮಯಕ್ಕೆ ಸರಿಯಾಗಿ ತುಮಕೂರಿನ ಕಡೆಯಿಂದ ಬರುವ ರೈಲನ್ನು ಗಮನಿಸಿದ ನನ್ನ ಸೋದರತ್ತೆ, “ಏ ಸತೀಶ...” ಎಂದು ಕೂಗಿ ಕೈಹಿಡಿದು ಎಳೆದದ್ದು. ಅಂದು ಅತ್ತೆ ಕೈಹಿಡಿದು ಎಳೆಯದಿದ್ದರೆ ಇಂದು ನಾನು ನಾನಾಗಿರುತ್ತಿರಲಿಲ್ಲ. ಈ ರೀತಿಯಾಗಿ ಅಂದಿನ ಭಯಾನಕ ಅನುಭವದೊಂದಿಗೆ ಶುರುವಾದ ರೈಲ್ವೇ ಗೇಟಿನ ಸಂಬಂಧ ಇಂದಿನ ನನ್ನ ದೈನಂದಿನ ಚಟುವಟಿಕೆಯ ಒಂದು ಅವಿಭಾಜ್ಯ ಅಂಗವಾಗಿರುವ ತುಮಕೂರಿನ ಉಪ್ಪಾರಹಳ್ಳಿಯ ರೈಲ್ವೇ ಗೇಟ್ ನಿಂದ ಒಂದು ನಂಟಂತೆ ಬೆಸೆದುಕೊಂಡಿದೆ. ಉಪ್ಪಾರಹಳ್ಳಿಯ ರೈಲ್ವೆಗೇಟನ್ನು ನಾನು ಮೊದಲು ನೋಡಿದ್ದು ಬಿ.ಎಸ್ಸಿ., ಓದುತ್ತಿದ್ದಾಗ. ಒಂದು ಸಂಜೆ ಕಂಪ್ಯೂಟರ್ ಲ್ಯಾಬನ್ನು ಮುಗಿಸಿಕೊಂಡು ನಾನು ಮತ್ತು ನನ್ನ ಕೆಲವು ಕಂಪ್ಯೂಟರ್ ಸೈನ್ಸ್‍ನ ಗೆಳೆಯರು “ಟ್ರೂ ಲೈಸ್” ಎಂಬ ಇಂಗ್ಲೀಷ್ ಸಿನಿಮಾವನ್ನು ನೋಡಲು ಆಗಿದ್ದ “ರೇಣುಕಾ” ಥೀಯೆಟರ್‍ಗೆ ನಡೆದುಕೊಂಡೇ ಹೋಗಿದ್ದೆವು. ಟೌನ್ ಹಾಲ್ ನಿಂದ ನಡೆದು ರೈಲ್ವೇ ಸ್ಟೇಷನ್ ಮಾರ್ಗವಾಗಿ ಉಪ್ಪಾರಹಳ್ಳಿ ರೈಲ್ವೇ ಗೇಟನ್ನು ದಾಟಿ ಶೆಟ್ಟಿಹಳ್ಳಿಯ ರೇಣುಕ