ಪೋಸ್ಟ್‌ಗಳು

ನವೆಂಬರ್, 2012 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ
ಇಮೇಜ್
“ಬಾಲ್ ಪೆನ್” ಸಿನಿಮಾದ ಗುಂಗಿನಲ್ಲಿ ಗುಬ್ಬಚ್ಚಿ ಕನ್ನಡಿಗ ಶನಿವಾರವೇ ಗೆಳೆಯ ವಿಶುವಿನ ಮದುವೆಗೆ ಹೋಗಲಾಗುತ್ತಿಲ್ಲವಲ್ಲ ಎಂದು ಮನಸು ಬೇಸರದಿಂದ ಕೂಡಿತ್ತು. ಮದುವೆ ಎಂಬುದು ಬಹುತೇಕ ಜನರ ಜೀವನದಲ್ಲಿ ಒಮ್ಮೆ ಮಾತ್ರ ನಡೆಯುವ ಘಟನೆ. ಎರಡು ಹೃದಯಗಳು ಕಾಯಾ ವಾಚಾ ಮನಸ ಹಿರಿಯರ, ಗೆಳೆಯರ ಸಮ್ಮುಖದಲ್ಲಿ ಸೇರುವ ಅಮೂಲ್ಯ ಕ್ಷಣ. ಅದರಲ್ಲೂ ಬಾಲ್ಯದ ಜೀವದ ಗೆಳೆಯರು ಸೇರಿದರೆಂದರೆ ಆ ಮದುವೆಯ ಖದರ್ರೇ ಬೇರೆ. ಅದೊಂದು ಮರೆಯಲಾರದ “ಆಟೋಗ್ರಾಫ್” ಆಗಿಬಿಡುತ್ತದೆ. ಇಷ್ಟೆಲ್ಲಾ ಕಾರಣಗಳಿದ್ದರೂ ಮದುವೆ ಉಡುಪಿಯಲ್ಲಿ ಎಂಬ ಒಂದೇ ಕಾರಣ ನಾನು ಮದುವೆಗೆ ಹೋಗಲಾಗುವುದಿಲ್ಲ ಎಂದು ಕಡೇ ಘಳಿಗೆಯಲ್ಲಿ ನಿರ್ಧಾರ ತಳೆಯಲು ಸಾಕಿತ್ತು. ಅಲ್ಲಿಗೆ ಮನಸ್ಸು ಮುದುಡಿತ್ತು ಮತ್ತು ಭಾನುವಾರವೆಲ್ಲಾ ಮದುವೆಯ ಗುಂಗಿನಲ್ಲೇ ಬೇಸರದಿಂದ ಕಳೆಯುವುದೆಂದು ಮನಸ್ಸು ತೆಪ್ಪಗಿತ್ತು. ಯಾರಾದರೂ ಗೆಳೆಯರ ಫೋನ್ ಬಂದರೆ ಮನಸ್ಸಿಗೆ ಸ್ವಲ್ಪ ಹಿತವಾಗಬಹುದೆಂದು ಅಂದುಕೊಳ್ಳುತ್ತಿದ್ದ ಸಮಯಕ್ಕೆ ಸರಿಯಾಗಿ ಆತ್ಮೀಯರಾದ ಶಿವು ಕೆ. “ವೆಂಡರ್ ಕಣ್ಣು” ಅವರ ಫೋನ್ ಬಂತು. ಹಾಯ್ ಸರ್, ಹಲೋ ಸರ್ ಮುಗಿದ ಮೇಲೆ, ನೀವು ನಾಳೆ ಬೆಂಗಳೂರಿಗೆ ಬಂದರೆ ಒಂದು ಒಳ್ಳೆಯ ಸಿನಿಮಾ ನೋಡಬಹುದು ನೋಡಿ. ಸ್ವಲ್ಪ ಟೈಮ್ ಮಾಡಿಕೊಳ್ಳಿ. ನೀವು ಬಂದರೆ ಇಲ್ಲಿ ಹಲವರಿಗೆ ಸರ್‌ಪ್ರೈಸ್ ಕೊಡೋಣ ಎಂದು ಹೇಳಿದರು. ನನಗೆ ಇಲ್ಲವೆನ್ನಲಾಗಲಿಲ್ಲ. ಆಗಲೇ ಅವರು ಹೇಳಿದ್ದು ಕನ್ನಡದಲ್ಲಿ ಅಪರೂಪವೆನ್ನಿಸಬಹುದಾದ ಒಂದು ಸಿನಿಮಾ ಮ