ಪೋಸ್ಟ್‌ಗಳು

ಜನವರಿ, 2013 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಅವಳೊಂದು ಹೂ... ಹೊಸಕದಿರಿ

‘ಭಾರತದಲ್ಲಿ ಪ್ರತಿ ೨೦ ನಿಮಿಷಕ್ಕೆ ಒಂದು ಅತ್ಯಾಚಾರವಾಗುತ್ತಿದೆ.  ಆದರೂ ಅತ್ಯಾಚಾರದ ವಿರುದ್ಧ ಪ್ರತಿಭಟಿಸಲು ೨೦ ನಿಮಿಷಗಳನ್ನೂ  ಸರ್ಕಾರ ಮಹಿಳೆಗೆ ಕೊಡುತ್ತಿಲ್ಲ’.                                               - ತಸ್ಲೀಮಾ ನಸ್ರೀನ್ (ಲೇಖಕಿ). ಹೆಣ್ಣು ಪ್ರೀತಿಯ ಪ್ರತೀಕ. ಅವಳು ನಮ್ಮ ಸಂಸ್ಕೃತಿ. ಅವಳೊಂದು ಹೂ. ಸಂಸ್ಕೃತಿಯ ತವರೂರಾದ ನಮ್ಮ ಭಾರತ ದೇಶ ಅವಳನ್ನು ಇನ್ನೂ ಸರಿಯಾಗಿ ಅರ್ಥಮಾಡಿಕೊಂಡಿಲ್ಲವೇನೋ ಎಂದೆನಿಸುತ್ತಿದೆ. ಅಂಕಿ-ಅಂಶಗಳನ್ನು ನೋಡಿದರೆ ದಿನವೊಂದರಲ್ಲಿ ಸುಮಾರು ಅರವತ್ತು ಅತ್ಯಾಚಾರಗಳಾಗುತ್ತಿವೆ. ನಾವೆಲ್ಲರೂ ಹೆಮ್ಮೆಯಿಂದ ಭಾರತೀಯರು ಎಂದು ಹೇಳಿಕೊಂಡು ತಲೆಯೆತ್ತಿ ಮೆರೆಯುವುದು ಬರೀ ನಾಟಕವೆಂದೆನಿಸುತ್ತಿದೆ. ಹೆಚ್ಚಾಗಿ ಭಾಷಣಗಳಲ್ಲಿ ನಮ್ಮ ಆಚಾರ, ವಿಚಾರ ಎಂದು ಹೇಳುವುದರ ಜೊತೆಗೆ ಈಗ ಅತ್ಯಾಚಾರ, ಅನಾಚಾರ ಎಂಬ ಪದಗಳನ್ನು ಸೇರಿಸಬೇಕಿದೆ. ೨೩ ವರ್ಷದ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕವಾಗಿ ನಡೆದ ಅತ್ಯಾಚಾರ ಮತ್ತು ಹಲ್ಲೆಯ ದೆಹಲಿ ಪ್ರಕರಣ ಎಂಥವರನ್ನೂ ತಲೆತಗ್ಗಿಸುವಂತೆ ಮಾಡಿದೆ. ಪ್ರತಿಯೊಬ್ಬ ಭಾರತೀಯನೂ ಚಿಂತಿಸುವಂತಾಗಿದೆ. ಓಡುತ್ತಿದ್ದ ಬಸ್ಸಿನಲ್ಲಿ ಅವಳಿಗಾದ ಹಿಂಸೆ, ನೋವು, ಅವಮಾನ ಊಹಿಸಲೂ ಅಸಾಧ್ಯವಾದುದಾಗಿದೆ. ಅತ್ಯಾಚಾರದ ನಂತರ ಸುಮಾರು ಎರಡು ಗಂಟೆಗಳ ಕಾಲ ಅವಳು ರಸ್ತೆಯಲ್ಲೇ ಇದ್ದ ವಿಷಯ ಇವತ್ತಿನ ನಾಚಿಕೆಗೇಡಿನ ಸಂಗತಿಯಾಗಿದೆ. ವಿದ್ಯಾವಂತರಿಂದಲೇ ತುಂಬಿ ತುಳುಕುತ್ತಿವೆ ಎನ್ನುವ ನಗರ