ಪೋಸ್ಟ್‌ಗಳು

ಫೆಬ್ರವರಿ, 2013 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಅರೆಂಜ್ಡ್ ಲವ್

ಇಮೇಜ್
ಅರೆಂಜ್ಡ್ ಲವ್ ಪ್ರೀತಿಯೆಂಬ ಎರಡಕ್ಷರದಲ್ಲಿ....... - ಚಂಪರಾಣಿ ಜಿ.ಸಿ ಪ್ರೀತಿ ಎಂದಾಕ್ಷಣ ಎಲ್ಲರೂ ಯೋಚಿಸುವುದು ಹೆಣ್ಣು ಮತ್ತು ಗಂಡಿನ ನಡುವೆ ಹದಿ ಹರಯದಲ್ಲಿ ಉಂಟಾಗುವ ಪ್ರೀತಿಯನ್ನೇ. ಆದರೆ ಅದರಾಚೆಗೂ ಪ್ರೀತಿ ಎಲ್ಲೆಲ್ಲೂ ಇರುತ್ತದೆ. ನನ್ನ ಮಗಳು ತನ್ನ ಪುಟ್ಟ ಕೈಗಳಿಂದ ನನ್ನ ಕೆನ್ನೆ ಸವರಿ, ‘ನನ್ನ ಪ್ರೀತಿ ಅಮ್ಮ’ ಅಂದಾಗ, ಒಬ್ಬ ತಂದೆ ‘ನನ್ನ ಪ್ರೀತಿ ಪಾಪು’ ಎಂದಾಗ, ಒಬ್ಬ ಗೆಳತಿ ತನ್ನ ಆತ್ಮೀಯ ಗೆಳತಿಗೆ ‘ಪ್ರೀತಿಯ ಗೆಳತಿ’ ಅಂದಾಗ, ಒಬ್ಬ ಅಕ್ಕ ತನ್ನ ತಮ್ಮನಿಗೆ ‘ನನ್ನ ಪ್ರೀತಿ ತಮ್ಮ’ ಎಂದಾಗ, ಒಬ್ಬ ತಂಗಿ ತನ್ನ ಅಣ್ಣನಿಗೆ ‘ನನ್ನ ಪ್ರೀತಿ ಅಣ್ಣ’ ಎಂದಾಗ, ಅಲ್ಲೆಲ್ಲಾ ಪ್ರೀತಿ ಇದ್ದೇ ಇರುತ್ತದೆ. ಆದರೆ ಜನ ಈ ಎಲ್ಲಾ ಪ್ರೀತಿಯನ್ನು ಮಮತೆ, ಮಮಕಾರ, ಸ್ನೇಹ ಎಂದು ಬೇರೆ ಬೇರೆ ಹೆಸರಿನಲ್ಲಿ ಕರೆದು ಅವು ಪ್ರೀತಿಯೇ ಅಲ್ಲವೆನ್ನುವಂತೆ ಪ್ರತಿಬಿಂಬಿಸುತ್ತಾರೆ. ಈ ಎಲ್ಲಾ ಸಂಬಂಧಗಳಲ್ಲೂ ಇರುವುದು ಅಪರಿಮಿತವಾದ ಪ್ರೀತಿಯಷ್ಟೇ. ಪ್ರೀತಿಯ ಹೆಸರು ಏನೇ ಇದ್ದರೂ ಅದು ಹೊರಹೊಮ್ಮುವ ಮತ್ತು ಒಂದು ಹೃದಯದಿಂದ ಮತ್ತೊಂದು ಹೃದಯಕ್ಕೆ ನೀಡುವ ನೆಮ್ಮದಿ, ಸಂತೋಷ ಇವುಗಳೆಲ್ಲಾ ಬಣ್ಣಿಸಲಸದಳ. ಪ್ರೀತಿ ಬಯಸುವ ಪ್ರತಿಯೊಂದು ಹೃದಯಕ್ಕೂ ಪ್ರೀತಿ ದೊರೆತರೆ ಜಗತ್ತಿನಲ್ಲಿ ಯಾವುದೇ ರೀತಿಯ ಸಮಸ್ಯೆಗಳಿರುವುದಿಲ್ಲ. ಪ್ರೀತಿ ತುಂಬಿರುವ ಯಾವುದೇ ಹೃದಯವೂ ಕೆಟ್ಟದನ್ನು ಯೋಚಿಸುವುದಿಲ್ಲ. ಹೃದಯದ ತುಂಬ ಪ್ರೀತಿಯೇ ಇರುವಾಗ ಬೇರೆ ಯೋಚನೆಗಳಿಗೆ