ಅರೆಂಜ್ಡ್ ಲವ್
ಪ್ರೀತಿಯೆಂಬ ಎರಡಕ್ಷರದಲ್ಲಿ.......
- ಚಂಪರಾಣಿ ಜಿ.ಸಿ
ಪ್ರೀತಿ ಎಂದಾಕ್ಷಣ ಎಲ್ಲರೂ ಯೋಚಿಸುವುದು ಹೆಣ್ಣು ಮತ್ತು ಗಂಡಿನ ನಡುವೆ ಹದಿ ಹರಯದಲ್ಲಿ ಉಂಟಾಗುವ ಪ್ರೀತಿಯನ್ನೇ. ಆದರೆ ಅದರಾಚೆಗೂ ಪ್ರೀತಿ ಎಲ್ಲೆಲ್ಲೂ ಇರುತ್ತದೆ. ನನ್ನ ಮಗಳು ತನ್ನ ಪುಟ್ಟ ಕೈಗಳಿಂದ ನನ್ನ ಕೆನ್ನೆ ಸವರಿ, ‘ನನ್ನ ಪ್ರೀತಿ ಅಮ್ಮ’ ಅಂದಾಗ, ಒಬ್ಬ ತಂದೆ ‘ನನ್ನ ಪ್ರೀತಿ ಪಾಪು’ ಎಂದಾಗ, ಒಬ್ಬ ಗೆಳತಿ ತನ್ನ ಆತ್ಮೀಯ ಗೆಳತಿಗೆ ‘ಪ್ರೀತಿಯ ಗೆಳತಿ’ ಅಂದಾಗ, ಒಬ್ಬ ಅಕ್ಕ ತನ್ನ ತಮ್ಮನಿಗೆ ‘ನನ್ನ ಪ್ರೀತಿ ತಮ್ಮ’ ಎಂದಾಗ, ಒಬ್ಬ ತಂಗಿ ತನ್ನ ಅಣ್ಣನಿಗೆ ‘ನನ್ನ ಪ್ರೀತಿ ಅಣ್ಣ’ ಎಂದಾಗ, ಅಲ್ಲೆಲ್ಲಾ ಪ್ರೀತಿ ಇದ್ದೇ ಇರುತ್ತದೆ.
ಆದರೆ ಜನ ಈ ಎಲ್ಲಾ ಪ್ರೀತಿಯನ್ನು ಮಮತೆ, ಮಮಕಾರ, ಸ್ನೇಹ ಎಂದು ಬೇರೆ ಬೇರೆ ಹೆಸರಿನಲ್ಲಿ ಕರೆದು ಅವು ಪ್ರೀತಿಯೇ ಅಲ್ಲವೆನ್ನುವಂತೆ ಪ್ರತಿಬಿಂಬಿಸುತ್ತಾರೆ. ಈ ಎಲ್ಲಾ ಸಂಬಂಧಗಳಲ್ಲೂ ಇರುವುದು ಅಪರಿಮಿತವಾದ ಪ್ರೀತಿಯಷ್ಟೇ. ಪ್ರೀತಿಯ ಹೆಸರು ಏನೇ ಇದ್ದರೂ ಅದು ಹೊರಹೊಮ್ಮುವ ಮತ್ತು ಒಂದು ಹೃದಯದಿಂದ ಮತ್ತೊಂದು ಹೃದಯಕ್ಕೆ ನೀಡುವ ನೆಮ್ಮದಿ, ಸಂತೋಷ ಇವುಗಳೆಲ್ಲಾ ಬಣ್ಣಿಸಲಸದಳ.
ಪ್ರೀತಿ ಬಯಸುವ ಪ್ರತಿಯೊಂದು ಹೃದಯಕ್ಕೂ ಪ್ರೀತಿ ದೊರೆತರೆ ಜಗತ್ತಿನಲ್ಲಿ ಯಾವುದೇ ರೀತಿಯ ಸಮಸ್ಯೆಗಳಿರುವುದಿಲ್ಲ. ಪ್ರೀತಿ ತುಂಬಿರುವ ಯಾವುದೇ ಹೃದಯವೂ ಕೆಟ್ಟದನ್ನು ಯೋಚಿಸುವುದಿಲ್ಲ. ಹೃದಯದ ತುಂಬ ಪ್ರೀತಿಯೇ ಇರುವಾಗ ಬೇರೆ ಯೋಚನೆಗಳಿಗೆ ಸ್ಥಳವೆಲ್ಲಿ? ಮನುಜಕುಲಕ್ಕೆ ಪ್ರೀತಿ ಯಾವಾಗಲೂ ಬೇಕು. ಎಲ್ಲರಲ್ಲೂ ಪ್ರೀತಿಯೊಂದಿದ್ದರೆ ಭೂಮಿ ಪ್ರಶಾಂತವಾಗಿರುತ್ತದೆ. ಪ್ರಭು ಏಸುಕ್ರಿಸ್ತರು ‘ನಿನ್ನ ನೆರೆಯವರನ್ನು ನಿನ್ನಂತೆಯೇ ಪ್ರೀತಿಸು’ ಎಂದು ಹೇಳುತ್ತಾರೆ. ಮನುಷ್ಯ ತನ್ನನ್ನು ತಾನು ಪ್ರೀತಿಸಿದಷ್ಟು ಬೇರೆ ಯಾರನ್ನೂ ಪ್ರೀತಿಸುವುದಿಲ್ಲವೆಂಬುದು ಜಗಜ್ಜಾಹೀರು. ಆದ್ದರಿಂದಲೇ ಅವರು ನಿನ್ನಂತೆಯೇ ಪರರನ್ನು ಪ್ರೀತಿಸು ಎಂದು ಹೇಳಿರುವುದು.
ಜಗತ್ತಿನಲ್ಲಿ ತಾಯಿ-ಮಗು ಪ್ರೀತಿ, ಸೋದರ ಪ್ರೀತಿ, ಗೆಳೆಯರ ಪ್ರೀತಿ, ಸಂಬಂಧಿಕರ ಪ್ರೀತಿ, ಎಂಥೆಂಥಾ ಪ್ರೀತಿ ಇದ್ದರೂ ಅವು ಹೆಚ್ಚು ಮಹತ್ವ ಹೊಂದುವುದಿಲ್ಲ. ಮಹತ್ವ ಪಡೆಯುವುದು, ಹೆಚ್ಚು ಚರ್ಚೆಗೊಳಗಾಗುವುದು ಯುವಜನರ ಪ್ರಣಯ, ಪ್ರೇಮ, ಪ್ರೀತಿ. ಆದರೆ ಈಗಿನ ಯುವ ಪೀಳಿಗೆಯ ಓಟವನ್ನು ನೋಡಿದರೆ ಪ್ರೀತಿ ತನ್ನ ಎಲ್ಲಾ ಮೌಲ್ಯಗಳನ್ನು ಕಳೆದುಕೊಂಡಿದೆ ಎಂದೆನಿಸುತ್ತದೆ. ಇವರೆಲ್ಲರಿಗೆ ಪ್ರೀತಿಯ ಮಹತ್ವ, ಅದರ ಅಗತ್ಯತೆ, ಅದರಿಂದ ಮನಸ್ಸಿಗೆ ಸಿಗುವ ನೆಮ್ಮದಿ, ಬಾಳಿಗೆ ಸಿಗುವ ಒಂದು ಗುರಿ ಮತ್ತು ಸರಿ ದಾರಿ ಯಾವುದೂ ಗೊತ್ತಿರುವುದಿಲ್ಲ. ದಿನ್ನಕ್ಕೊಂದು ಪ್ರೇಮ ಪ್ರಕರಣ. ವರ್ಷದಲ್ಲಿ ಏನಿಲ್ಲವೆಂದರೂ ಇಬ್ಬರು-ಮೂವರನ್ನು ಪ್ರೀತಿಸುವುದು ಅವರಿಂದ ಬೇರಾಗುವುದು. ಮತ್ತೆ ಅದೇ ಪುನರಾವರ್ತನೆ. ಈ ರೀತಿಯ ಸಂಬಂಧಗಳಲ್ಲಿ ಪ್ರೀತಿ ಇದೆ ಎಂದು ನಂಬುವುದಾದರೂ ಹೇಗೆ?
ಹಾಗಾದರೆ ಪ್ರೀತಿ ಈಗ ಜಗತ್ತಿನಲ್ಲಿ ಇಲ್ಲವೇ? ಇದೆ ಖಂಡಿತ ಇದೆ. ಆದರೆ ಮನುಷ್ಯ ಮನುಷ್ಯನನ್ನು ಪ್ರೀತಿಸುವ ಬದಲು ವಸ್ತುಗಳನ್ನು ಪ್ರೀತಿಸುತ್ತಾನೆ. ಮನಸ್ಸನ್ನು ಪ್ರೀತಿಸುವ ಬದಲು ‘ಮನಿ’ಯನ್ನು ಪ್ರೀತಿಸುತ್ತಾನೆ. ಹಾಗಾಗಿ ಎಲ್ಲೂ ನಿರ್ಮಲ ಪ್ರೀತಿ-ಪ್ರೇಮ ನಮಗೆ ಸಿಗುವುದಿಲ್ಲ. ಎಲ್ಲರೂ ಒಂದು ರೀತಿಯ ಕಂಫರ್ಟ್‌ಗಾಗಿ ಹಾತೊರೆಯುತ್ತಾರೆ. ನಿಜ ಪ್ರೀತಿ ಯಾರಿಗೂ ಬೇಡವಾಗಿದೆ. ಜೊತೆಗೆ ಪ್ರೀತಿಯು ಒಂದು ರೀತಿಯ ಅನುಕೂಲಕ್ಕೆ ತಕ್ಕಂತ ಅಂಶವಾಗಿದೆ. ಅದನ್ನೇ ನಾನು ಅರೇಂಜ್ಡ್ ಲವ್ ಎಂದು ಕರೆಯುತ್ತೇನೆ.
ಕಾಲೇಜಿನಲ್ಲಿ ಹುಡುಗ ಹುಡುಗಿ ಒಬ್ಬರನ್ನೊಬ್ಬರು ನೋಡುತ್ತಾರೆ. ಅವರಲ್ಲಿ ಪರಿಚಯ ಸಹ ಬೆಳೆಯುತ್ತದೆ. ಅವರಲ್ಲಿ ಸೆಳೆತವಿದ್ದರೂ ಇಬ್ಬರೂ ಕೆಲವು ದಿನಗಳು ಸುಮ್ಮನಿರುತ್ತಾರೆ. ಒಂದು ಸುಂದರವಾದ ಸುಸಂದರ್ಭದಲ್ಲಿ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಮತ್ತು ಅವರ ಮನೆಗಳಲ್ಲಿ ಒಪ್ಪಿಸಿ ಮದುವೆಯಾಗುತ್ತಾರೆ. ಈ ವಿಚಾರ ಸಾದಾ ಸೀದಾ ಎನಿಸಿದರೂ ಅದರ ಹಿಂದಿನ ಒಂದು ಮರ್ಮವನ್ನು ಹೇಳುತ್ತೇನೆ ಕೇಳಿ. ಪರಿಚಯವಾದ ಹುಡುಗ ಹುಡುಗಿ ಒಬ್ಬರಿಗೊಬ್ಬರು ತಿಳಿಯದಂತೆ ಅವರ ಹಿಂದಿನ ಇತಿಹಾಸವನ್ನು ಹುಡುಕುತ್ತಾರೆ. ಅವರು ಎಷ್ಟು ಜಾಣ್ಮೆಯಿಂದ ಈ ಕೆಲಸ ಮಾಡುತ್ತಾರೆಂದರೆ ಯಾರಿಗೂ ಅವರ ಬಗ್ಗೆ ಅನುಮಾನ ಬರುವುದಿಲ್ಲ. ಹುಡುಗ ಎಂಥ ಜಾತಿಯವನು ಎಂಬುದರಿಂದ ಹಿಡಿದು ಹುಡುಗಿಯ ಮನೆತನದವರು ಎಷ್ಟು ಶ್ರೀಮಂತರು ಎಂಬುವವರೆಗೂ ಎಲ್ಲವನ್ನೂ ಕೂಲಂಕುಶವಾಗಿ ತಿಳಿದುಕೊಂಡು ಎಲ್ಲಾ ಲೆಕ್ಕಾಚಾರಗಳನ್ನು ಕೂಡಿ, ಕಳೆದು, ಭಾಗಿಸಿ, ಗುಣಾಕಾರ ಹಾಕಿ ತಮಗೆ ಸರಿಹೊಂದುತ್ತದೆಯೇ? ಇಲ್ಲವೇ? ಎಂದೆಲ್ಲಾ ಯೋಚಿಸುತ್ತಾರೆ. ಸರಿಹೊಂದುವುದಿಲ್ಲವೆಂದಾದಲ್ಲಿ ಅವರ ಪರಿಚಯ ಕೇವಲ ಪರಿಚಯಕ್ಕೆ ನಿಂತು ಹೋಗುತ್ತದೆ. ಸರಿಹೊಂದುತ್ತದೆ ಎಂದು ತಿಳಿದ ನಂತರ ತಮ್ಮ ಪ್ರೇಮನಿವೇದನೆ ಮಾಡಿಕೊಳ್ಳುತ್ತಾರೆ.
ಹುಡುಗ ಒಳ್ಳೆಯ ಮನೆತನದವ, ಜೊತೆಗೆ ಒಂದೇ ಜಾತಿ, ಹುಡುಗಿಯ ಮನೆಯವರು ಇವರಿಗೆ ಸರಿಸಮಾನರು, ಮನೆಗಳಲ್ಲಿ ಹೇಳಿದರೂ ಅಡ್ಡಿ ಆತಂಕಗಳು ಬರುವುದಿಲ್ಲ. ಕಥೆ ಶುಭಂ ಆಗುತ್ತದೆ. ಆದರೆ ಇಂಥಹ ಪ್ರೀತಿಯನ್ನು ನಿಜವಾದ ಪ್ರೀತಿ ಎಂದು ಹೇಗೆ ಒಪ್ಪಿಕೊಳ್ಳುವುದು. ಇದನ್ನು ಅರೆಂಜ್ಡ್ ಲವ್ ಅನ್ನದೇ ಮತ್ತೇನು ಹೇಳಲು ಸಾಧ್ಯ?
ಹುಡುಗ ಹುಡುಗಿ ಒಂದೇ ಕಡೆ ಕೆಲಸ ಮಾಡುತ್ತಿರುತ್ತಾರೆ. ಇಬ್ಬರಿಗೂ ಉತ್ತಮ ಸಂಬಳ. ಹುಡುಗನಿಗೆ ಅಥವಾ ಹುಡುಗಿಗೆ ತನ್ನ ಸಹೋದ್ಯೋಗಿಯ ವೈಯಕ್ತಿಕ ವಿಚಾರಗಳು ತಿಳಿದ ನಂತರ ಕ್ರಮೇಣ ಒಬ್ಬರನ್ನೊಬ್ಬರು ಆಕರ್ಷಿಸಲು ಪ್ರಾರಂಭಿಸುತ್ತಾರೆ. ಆಕರ್ಷಣೆ ಸ್ನೇಹವಾಗಿ, ಸ್ನೇಹ ಪ್ರೀತಿಯಾಗಿ ಬದಲಾಗುತ್ತದೆ. ಪ್ರೀತಿಯಾದಮೇಲೆ ಇನ್ನೇನು ಮುಂದಿನ ಭವಿಷ್ಯದ ಪ್ಲಾನ್ ನಡೆಯುತ್ತದೆ. ಒಬ್ಬರಿಗೊಬ್ಬರು ನೇರವಾಗಿಯೇ ಎಲ್ಲಾ ವಿಚಾರಗಳನ್ನು ಮಾತನಾಡಿಕೊಳ್ಳುತ್ತಾರೆ. ನಾವಿಬ್ಬರೂ ಮದುವೆಯಾದರೆ ಉತ್ತಮವಾದ ಜೀವನ ನಡೆಸಬಹುದು ಎಂದು ಪ್ಲಾನ್ ಮಾಡಿಕೊಳ್ಳುತ್ತಾರೆ. ಇಬ್ಬರ ಮನೆಯಲ್ಲಿ ವಿಷಯ ತಿಳಿಸುತ್ತಾರೆ. ಅವರ ತಂದೆ-ತಾಯಿಯರು ಹುಡುಗ ಅಥವಾ ಹುಡುಗಿಯ ಜಾತಿ, ಕುಲ, ಗೋತ್ರ ಎಂದೆಲ್ಲಾ ಜಾಲಾಡಿ ಸರಿ ಹೊಂದಿದರೆ ಒಪ್ಪುತ್ತಾ ಇಲ್ಲವೇ ಒಪ್ಪುವುದಿಲ್ಲ. ಅವರೆಲ್ಲರೂ ಒಪ್ಪಲಿ ಬಿಡಲಿ ಹುಡುಗ ಹುಡುಗಿ ಮದುವೆಯಾಗುತ್ತಾರೆ. ಇದೂ ಕೂಡ ಅರೆಂಜ್ಡ್ ಲವ್ ತಾನೆ. ಇಲ್ಲಿ ಇಬ್ಬರಿಗೂ ಬೇಕಿರುವುದು ಅನುಕೂಲ, ಒಂದು ಕಂಫರ್ಟ್. ಅದು ಅವರಿಗೆ ದೊರಕುತ್ತದೆ. ಆದರೆ ಇಬ್ಬರಿಗೂ ಪ್ರೀತಿ ಬೇಕೆನಿಸಲಿಲ್ವೇ? ಅನಿಸುತ್ತದೆ. ಅನಿಸಿದಾಗ ವಿವಾಹ ವಿಚ್ಛೇದನ ಮರು ಮದುವೆ ನಡೆಯುತ್ತದೆ. ದೋಷ ಯಾರದ್ದು? ಎಲ್ಲಿ ತಪ್ಪಾಯ್ತು? ಎಲ್ಲಿ ಎಡೆವಿದೆವು? ಎಂದು ಇಬ್ಬರೂ ಯೋಚಿಸುವುದಿಲ್ಲ.
ಹುಡುಗ ಹುಡುಗಿ ಒಬ್ಬರನ್ನೊಬ್ಬರು ಪಂಚಪ್ರಾಣದಂತೆ ಪ್ರೀತಿಸಿಕೊಂಡಿದ್ದರು. ಅವರ ವಿಷಯ ಮನೆಯಲ್ಲಿ ಗೊತ್ತಾಗುವ ಮೊದಲೇ ಅವರಿಬ್ಬರಿಗೂ ಒಳ್ಳೆಯ ಸಂಬಂಧಗಳು ಬಂದವು. ಇಬ್ಬರೂ ತುಂಬಾ ಯೋಚಿಸಿದರು. ತುಂಬಾ ದಿನಗಳವರೆಗೆ ಅವರಲ್ಲಿ ಒಂದು ಸಂಘರ್ಷ ನಡೆಯುತ್ತದೆ. ಕೊನೆಗೆ ಒಂದು ದಿನ ಇಬ್ಬರೂ ಮದುವೆಯಾದರು! ಪ್ರೀತಿಸಿದವರನ್ನಲ್ಲ!! ಅವರಿಗೆ ಬಂದಿದ್ದ ಒಳ್ಳೆಯ ಸಂಬಂಧದ ಹುಡುಗ ಹುಡುಗಿಯೊಡನೆ ಅವರ ಮದುವೆಯಾಯಿತು. ಅವನು ಇವಳ ಮದುವೆಗೆ ಇವನು ಅವಳ ಮದುವೆ ಹೋಗಿ ಶುಭಕೋರಿ ಬರುತ್ತಾರೆ. ಇದೂ ಅರೆಂಜ್ಡ್ ಲವ್ ಅಲ್ಲವೇ? ಇದ್ದಷ್ಟು ದಿನ ಪ್ರೀತಿಸು ಮುಂದೆ ಗಾಳಿ ಬಂದಾಗ ತೂರಿಕೋ ಎಂಬಂಥ ಭಾವ ನಮ್ಮ ಕೆಲವು ಯುವಜನತೆಯಲ್ಲಿದೆ.
ಹುಡುಗ ತಮ್ಮ ಜಾತಿಯ ಸಮಾರಂಭದಲ್ಲಿ ಹುಡುಗಿಯನ್ನು ನೋಡುತ್ತಾನೆ. ಅವಳ ಪೂರ್ವಾಪರ ತಿಳಿದುಕೊಂಡು ಅವಳ ಹಿಂದೆ ಬಿದ್ದು. ತನ್ನ ಪ್ರೀತಿ ನಿವೇದಿಸಿ. ಅವಳನ್ನು ಒಪ್ಪಿಸುತ್ತಾನೆ. ಅವಳು ಸಹ ಹುಡುಗನ ಶ್ರೀಮಂತಿಕೆ, ಯೌವನ, ಅವನು ನೀಡುವ ಕಂಫರ್ಟ್ ಎಲ್ಲವನ್ನೂ ನೋಡಿ; ಸರಿ ಎಂದು ಒಪ್ಪುತ್ತಾಳೆ. ಹುಡುಗ ಹುಡುಗಿ ಒಪ್ಪಿದಮೇಲೆ ತಾನೇ ಬಂದು ಹುಡುಗಿಯ ಮನೆಯಲ್ಲಿ ಮದುವೆ ಪ್ರಸ್ತಾಪ ಮಾಡುತ್ತಾನೆ. ತನ್ನ ಎಲ್ಲಾ ವಿಷಯಗಳನ್ನು ತಿಳಿಸುತ್ತಾನೆ. ಹುಡುಗಿಯ ತಂದೆ ತಾಯಿ ಎಲ್ಲವನ್ನೂ ಮನನಮಾಡಿ ಒಪ್ಪಿಗೆ ಸೂಚಿಸುತ್ತಾರೆ. ಇವನು ಮನೆಯವರನ್ನೆಲ್ಲಾ ಒಪ್ಪಿಸಿ ಮದುವೆ ಮಾಡಿಕೊಳ್ಳುತ್ತಾನೆ. ಮನೆಯವರು ಎಲ್ಲಾ ಸರಿಹೊಂದುತ್ತದೆಂದು ಮದುವೆ ಮಾಡಿಕೊಡುತ್ತಾರೆ. ಇದು ಅರೆಂಜ್ಡ್ ಲವ್ ಅಲ್ಲವೇ?
ಇನ್ನೂ ಕೆಲವು ಸಂದರ್ಭಗಳಲ್ಲಿ ಹುಡುಗ ಹುಡುಗಿಯರು ಸಮ ಅಂತಸ್ತಿನವರಾಗಿದ್ದಾಗ. ಕೆಲವು ಪೋಷಕರು ಜಾತಿಯ ಗೋಜಿಗೆ ಹೋಗದೆ ಮಕ್ಕಳ ಪ್ರೀತಿಗೆ ಸಮ್ಮತಿ ಸೂಚಿಸಿ ಮದುವೆಯನ್ನು ಮಾಡುತ್ತಾರೆ. ಎಲ್ಲರೂ ಅವರ ದೊಡ್ಡಗುಣವನ್ನು ಹೊಗಳುವವರೇ ಆಗಿರುತ್ತಾರೆ. ಆದರೆ ಒಣ ಹೂರಣ ಯಾರಿಗೂ ತಿಳಿದಿರುವುದಿಲ್ಲ. ಇಂತಹ ಮದುವೆಗಳಲ್ಲಿ ನಡೆಯುವ ಲೇವಾ ದೇವಿ, ಬೇರೆ ಯಾವ ಮದುವೆಗಳಲ್ಲೂ ನಡೆಯುವುದಿಲ್ಲ. ವರದಕ್ಷಿಣೆ, ವರೋಪಚಾರ ಜೋರಾಗಿಯೇ ಸಿಕ್ಕಿರುತ್ತದೆ. ಕೆಲವೊಮ್ಮೆ ವಧುದಕ್ಷಿಣೆ ಕೊಡುವುದೂ ಉಂಟು: ಅದು ಅಸಹಾಯಕ ಸ್ಥಿತಿಗಳಲ್ಲಿ ಮಾತ್ರ. ಹುಡುಗಿ ಕೆಲಸಕ್ಕೆ ಹೋಗುತ್ತಿದ್ದಾಳೆ, ದೊಡ್ಡ ಸಂಬಳದಾರಳು, ಅವಳನ್ನು ಜಿಗಣೆಯಂತೆ ಹೀರಿಕೊಳ್ಳಬಹುದು ಎಂಬೆಲ್ಲಾ ಲೆಕ್ಕಾಚಾರದಿಂದಲೇ ಎಲ್ಲರೂ ಇಂತಹ ಪ್ರೇಮ ವಿವಾಹಕ್ಕೆ ಸಮ್ಮತಿ ನೀಡುವುದು. ಇಲ್ಲಿ ಹುಡುಗ ಹುಡುಗಿಯ ಆಲೋಚನೆಗಳೂ ಬೇರೆಯಾಗಿರುವುದಿಲ್ಲ. ಅವರಿಬ್ಬರೂ ಮೊದಲು ಪ್ರೀತಿಸುವುದು ಅಂತಸ್ತನ್ನು, ನಂತರ ವ್ಯಕ್ತಿಯನ್ನು.
ಒಂದೇ ಜಾತಿ, ಒಂದೇ ಅಂತಸ್ತು, ಒಳ್ಳೆಯ ಕೆಲಸ, ಆಸ್ತಿ-ಪಾಸ್ತಿ, ಅನುಕೂಲಗಳನ್ನು ನೋಡಿ ಹುಟ್ಟುವುದು ಪ್ರೀತಿಯಲ್ಲ. ಅಂತಹ ಪ್ರೀತಿ ಕೇವಲ ಅರೆಂಜ್ಡ್ ಲವ್ ಆಗಿರುತ್ತದೆ. ನಿನ್ನಿಂದ ನನಗೆ ಅನುಕೂಲ, ನಮ್ಮ ಜಾತಿ ಒಂದೇ, ನಮ್ಮ ಅಂತಸ್ತು ಒಂದೇ, ನಾವು ಮದುವೆಯಾದರೆ ಸುಖವಾಗಿರಬಹುದು, ಈ ರೀತಿಯ ಲೆಕ್ಕಾಚಾರದ ಪ್ರೀತಿ ಪ್ರೀತಿಯಾಗಿರದೆ ಒಂದು ಭ್ರಮೆಯಾಗಿರುತ್ತದೆ. ಭ್ರಮೆ ಒಡೆದು ಹೋದರೆ ಭ್ರಮನಿರಸನವಾಗುವುದು ಖಚಿತ. ಅರೆಂಜ್ಡ್ ಲವ್ ಯಾವತ್ತಿದ್ದರೂ ಡೇಂಜರಸ್. ಅದು ಅಪಾಯವನ್ನು ನಾವೇ ಕರೆದು ಪಕ್ಕದಲ್ಲಿ ಕೂರಿಸಿಕೊಂಡಂತೆ. ಇಂತಹ ಎಷ್ಟೋ ಅರೆಂಜ್ಡ್ ಲವ್ ಕೊನೆಗೊಳ್ಳುವುದು ವಿಚ್ಛೇದನ ಅಥವಾ ಅಪರಾಧದಲ್ಲಿ. ಹೀಗೆ ಉದಾಹರಣೆಗಳು ಕೊಡುತ್ತಾ ಹೋದರೆ ಪುಟಗಟ್ಟಲೆ, ದಿನಗಟ್ಟಲೆ, ವರ್ಷಗಟ್ಟಲೆ ಕೊಡುತ್ತಿರಬಹುದು. ಇಂತಹುದೇ ಪ್ರೀತಿಯನ್ನು ನಮ್ಮ ಸುತ್ತಮುತ್ತ ನೋಡುತ್ತಿದ್ದೇವೆ, ನೋಡುತ್ತಲೇ ಇರುತ್ತೇವೆ.
ಯಾರಾದರೂ ಅಂತಹ ಅರೆಂಜ್ಡ್ ಲವ್‌ಗೆ ಪ್ಲಾನ್ ಮಾಡುತ್ತಿದ್ದರೆ ಅದನ್ನು ಕೈಬಿಡಿ. ಸ್ನೇಹಿತರು ಈ ಹಾದಿ ತುಳಿಯುತ್ತಿದ್ದಾರೆ ಎಂದು ನಿಮಗನ್ನಿಸಿದರೆ ಅವರಿಗೆ ಬುದ್ಧಿ ಹೇಳಿ ಅವರಿಗೆ ಮುಂದಿನ ಪರಿಣಾಮವನ್ನು ವಿವರಿಸಿ ಆ ಹಾದಿ ತುಳಿಯದಂತೆ ನೋಡಿಕೊಳ್ಳಿ. ಏಕೆಂದರೆ ಆ ಹಾದಿಯ ಅಂತ್ಯ ಅವರನ್ನು ಪ್ರಪಾತಕ್ಕೆ ತಳ್ಳುತ್ತದೆ. ಮತ್ತೆಂದೂ ಅವರು ಆ ಪ್ರಪಾತದಿಂದ ಮೇಲೇಳಲು ಸಾಧ್ಯವಿಲ್ಲ.
ಕೇವಲ ಯುವಕ ಯುವತಿಯರಲ್ಲಿ ಈ ಅರೆಂಜ್ಡ್ ಲವ್ ಇರುತ್ತದೆ ಎಂದು ಭಾವಿಸಬೇಡಿ.
ಇದು ಸಂಬಂಧಿಕರಲ್ಲಿ ಇರಬಹುದು, ಶ್ರೀಮಂತಿಕೆ ಇದ್ದಾಗ ಎಲ್ಲಾ ನೆಂಟರು ಇಷ್ಟರು ಹತ್ತಿರ ಇರುತ್ತಾರೆ, ‘ಬರಿಗೈ ನಾಯಿಗೂ ದೂರ’ ಎಂಬಂತೆ, ಬಡತನದಲ್ಲಿ ಎಲ್ಲರೂ ನಿಮ್ಮನ್ನು ತೊರೆದು ಹೋಗುತ್ತಾರೆ. ಅಥವಾ ಅಲ್ಲಿಯವರೆಗೆ ನೀವು ಯಾರು ಎಲ್ಲಿದ್ದೀರಿ ಹೇಗಿದ್ದೀರಿ ಎಂದೂ ಸಹ ತಿಳಿಯಲು ಇಚ್ಛಿಸದ ಸಂಬಂಧಿಕರು ನಿಮಗೆ ಒಳ್ಳೆಯ ಹೆಸರು, ಹಣ ಬಂದಾಗ ನಿಮ್ಮನ್ನು ಹುಡುಕಿಕೊಂಡು, ಬಾದರಾಯನ ಸಂಬಂಧ ಹೇಳಿಕೊಂಡು ನಿಮ್ಮ ಮನಸ್ಸಿನಲ್ಲಿ ಜಾಗ ಪಡೆಯಲು ಸರ್ಕಸ್ ಮಾಡುತ್ತಾರೆ. ಇದು ಅರೆಂಜ್ಡ್ ಲವ್ ಅಲ್ಲವೇ?
ಸ್ನೇಹಿತರಲ್ಲಿ ಇಂತಹ ಅರೆಂಜ್ಡ್ ಲವ್ ಕೇವಲ ೧% ಇರಬಹುದು. ಆದರೆ ಅದೂ ಇಲ್ಲದಿರುವುದೇ ನಿಜವಾದ ಸ್ನೇಹ. ಕೆಲವು ಹುಡುಗ ಹುಡುಗಿಯರನ್ನು ನಾನು ನೋಡಿದ್ದೇನೆ ಗಮನಿಸಿದ್ದೇನೆ. ಅವರು ತಮ್ಮ ಅಂತಸ್ತಿಗೆ ಸರಿಹೊಂದುವ ವ್ಯಕ್ತಿಗಳೊಡನೆ ಮಾತ್ರ ಸ್ನೇಹ ಮಾಡುತ್ತಾರೆ. ಅದೂ ತುಂಬಾ ಯೋಚಿಸಿ. ಯಾವುದೇ ಕಾರಣಕ್ಕೂ ತಮಗಿಂತ ಕಡಿಮೆಯವರಲ್ಲಿ ಅವರು ಪರಿಚಯವನ್ನೂ ಸಹ ಬೆಳೆಸಿಕೊಳ್ಳುವುದಿಲ್ಲ. ಹಾಗೆ ಕೆಲವು ಜಾತಿ ಸ್ನೇಹ, ಅನುಕೂಲ ಸ್ನೇಹ, ನಿಮಗೆ ಆಶ್ಚರ್ಯವಾಗಬಹುದು ಬಣ್ಣ ಸ್ನೇಹ ಕೂಡ ಇದೆ. ರೂಪಕ್ಕೆ ಕೊಟ್ಟಷ್ಟು ಬೆಲೆ ಜನ ಗುಣಕ್ಕೆ ನೀಡುವುದಿಲ್ಲ.
ಕೆಲವು ಸಂದರ್ಭಗಳಲ್ಲಿ ತಂದೆ-ತಾಯಿ ಮತ್ತು ಮಕ್ಕಳಲ್ಲೂ ಇರಬಹುದು. ಉದಾಹರಣೆಗೆ ಹುಟ್ಟಿದಾರಾಭ್ಯ ಒಂದು ಮಗುವನ್ನು ಕಡೆಗಣಿಸಿ ಆ ಮಗ/ಮಗಳು ದೊಡ್ಡ ಸಾಧನೆ ಮಾಡಿದಾಗ, ಅವರಿಗೆ ಶ್ರೀಮಂತಿಕೆ ಬಂದಾಗ ಅವರನ್ನು ಓಲೈಸುವುದು. ನನಗೆ ಮೊದಲಿಂದಲೂ ನೀನಂದ್ರೆ ಎಷ್ಟು ಪ್ರಾಣ. ನನಗೆ ಎಲ್ಲಾ ಮಕ್ಕಳಿಗಿಂತ ನೀನೇ ಮುಖ್ಯ. ನಿನ್ನನ್ನು ನಾನು ಹಾಗೆ ಸಾಕಿದೆ, ಹೀಗೆ ಬೆಳೆಸಿದೆ. ನನ್ನ ಜೀವ ನೀನೇ ಎಂದು ಪೋಷಕರು ಹೇಳಿರುವ ಎಷ್ಟೋ ಸಂದರ್ಭಗಳನ್ನು ನಾವು ನೋಡಿರುತ್ತೇವೆ. ಹಾಗೆಂದು ನಾನು ಎಲ್ಲರನ್ನೂ ದೂಷಿಸುತ್ತಿದ್ದೇನೆ ಎಂದಲ್ಲ. ಕ್ಷಮೆಯಿರಲಿ. ಸಂದರ್ಭಗಳು ಕೆಲವೊಮ್ಮೆ ಮನುಷ್ಯನ ಮನಸ್ಸಿನಲ್ಲಿ ಈ ಅರೆಂಜ್ಡ್ ಲವ್‌ಗೆ ಜಾಗ ಮಾಡಿಕೊಡುತ್ತವೆ.
ನಾವು ವಿವೇಕದಿಂದ ವರ್ತಿಸಿ ಅದು ನಮ್ಮ ಹತ್ತಿರ ಸುಳಿಯದಂತೆ ನೋಡಿಕೊಳ್ಳಬೇಕು. ಯಾರನ್ನಾದರೂ ಇಷ್ಟಪಟ್ಟರೆ ಅವರು ಹೇಗಿರುವರೋ ಹಾಗೆಯೇ ಇಷ್ಟಪಡಬೇಕು. ಇಷ್ಟವಾಗಲಿಲ್ಲವೆ ಬಿಟ್ಟುಬಿಡಿ ಅಷ್ಟೆ. ಆದರೆ ಯಾವುದೇ ಕಾರಣಕ್ಕೂ ಅರೆಂಜ್ಡ್ ಲವ್ ಎಂಬ ಸುಳಿಯಲ್ಲಿ ಮಾತ್ರ ಬೀಳಬಾರದು. ಒಮ್ಮೆ ಬಿದ್ದೆವೆಂದರೆ ಅಲ್ಲಿಂದ ಬಿಡಿಸಿಕೊಳ್ಳಲು ಸಾಧ್ಯವೇ ಇಲ್ಲ. ಪಾರಾಗುವ ದಾರಿಯಿಲ್ಲದ ಈ ಸುಳಿ ಬಿದ್ದವರನ್ನು ನುಂಗಿಹಾಕುತ್ತದೆ. ಮತ್ತೆ ನಾವು ಮನುಷ್ಯರೆಂದು ಕರೆಸಿಕೊಳ್ಳುವುದಕ್ಕೆ ಸಾಧ್ಯವಾಗದಂತೆ ನಮ್ಮನ್ನು ಬದಲಾಯಿಸಿಬಿಡುತ್ತದೆ.
ಪ್ರೀತಿಯಲ್ಲಿ ಭಾವನೆಗಳು ಬೆರೆಯಬೇಕು. ಮನಸ್ಸು ಮನಸ್ಸುಗಳ ಮಂಥನವಾಗಬೇಕು. ಹೃದಯ ಹೃದಯಗಳ ಮಿಲನವಾಗಬೇಕು. ಅದುವೇ ಪವಿತ್ರ ಪ್ರೇಮ. ನಿಜವಾದ ಪ್ರೀತಿ. ಹಾಗಲ್ಲದೆ ಅನುಕೂಲಗಳು ಸೇರಿದರೆ ಅದು ಅರೆಂಜ್ಡ್ ಲವ್.
ಫೆಬ್ರವರಿ ೧೪ ಪ್ರೇಮಿಗಳ ದಿನ. ನಿಮ್ಮೆಲ್ಲರಿಗೂ ನಮ್ಮ ಕಿವಿಮಾತು, ಪ್ರೀತಿಯನ್ನು ಪ್ರೀತಿಯಿಂದ ಪ್ರೀತಿಗಾಗಿ ಹಂಚಿಕೊಳ್ಳಿ. ನಿಮ್ಮೆಲ್ಲರಿಗೂ ಪ್ರೇಮಿಗಳ ದಿನದ ಶುಭಾಶಯಗಳು.
********

ಕಾಲೇಜ್ ಡೈರಿ ಮತ್ತು ಚಂಪಾರಾಣಿಯವರನ್ನು ಪರಿಚಯಿಸಿದ್ದು ಉತ್ತಮವಾಗಿದೆ.
ಪ್ರತ್ಯುತ್ತರಅಳಿಸಿಒಳ್ಳೆಯ ಲೇಖನ.
Superrrrrrr sir.....Abhinadanegalu...
ಪ್ರತ್ಯುತ್ತರಅಳಿಸಿ