ಪೋಸ್ಟ್‌ಗಳು

ಮೇ, 2015 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ರಜನಿ ನರಹಳ್ಳಿಯವರ ‘ಆತ್ಮವೃತ್ತಾಂತ’ : ಆತ್ಮಸಂಗಾತಿಗೆ ಅಕ್ಷರಗಳ ಶ್ರದ್ಧಾಂಜಲಿ

ಇಮೇಜ್
                 ನಾನು ಮತ್ತು ನನ್ನ ಶ್ರೀಮತಿ ತುಮಕೂರಿನ ಶ್ರೀಮತಿ ಎಂ.ಸಿ. ಲಲಿತಾರವರ ಮನೆಗೆ ನನ್ನ ನಾಲ್ಕನೇ ಪುಸ್ತಕ, ಮೊದಲ ಕಥಾಸಂಕಲನ    ‘ ಉಘೇ ಉಘೇ ’ ಪುಸ್ತಕ ಬಿಡುಗಡೆ ಕಾಯಕ್ರಮಕ್ಕೆ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಬೇಕೆಂದು ಕೋರಲು ಹೋಗಿದ್ದೆವು. ಅವರು ಅದಾಗಲೇ ನನ್ನ ‘ ಮುಗುಳ್ನಗೆ ’ ಕಾದಂಬರಿ ಬಿಡುಗಡೆ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಬಂದು ನನಗೆ ಶುಭ ಹಾರೈಸಿದ್ದರು. ಆದರೂ, ಮತ್ತೆ ಅವರನ್ನೇ ಕರೆಯಲು ಬಲವಾದ ಒಂದು ಕಾರಣವಿತ್ತು. ಅದೇನೆಂದರೆ, ಅವರು ತುಮಕೂರು ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷರಾಗಿದ್ದಾಗ ಏರ್ಪಡಿಸಿದ್ದ ಕಥಾಸ್ಪರ್ಧೆಯಲ್ಲಿ ನನ್ನ ‘ ಟ್ಯೂಷನ್ ಫೀಸು ’ ಕಥೆಗೆ ಎರಡನೇ ಬಹುಮಾನ ಬಂದಿತ್ತು. ಮತ್ತು ಆ ನಂತರವೂ ಅವರ ಅನನ್ಯ ಸಾಂಸ್ಕೃತಿಕ ವೇದಿಕೆಯ ಕಥಾಸ್ಪರ್ಧೆಯಲ್ಲಿ ‘ ಅಂಕುರ ’ ಕಥೆಗೆ ಸಮಾಧಾನಕರ ಬಹುಮಾನವೂ ಬಂದಿತ್ತು. ಅವರು ನನ್ನೊಳಗಿದ್ದ ಕಥೆಗಾರನಿಗೆ ವೇದಿಕೆ ಕಲ್ಪಿಸಿಕೊಟ್ಟರೆಂಬ ಅಭಿಮಾನದ ಮೇರೆಗೆ ಅವರೇ ಮುಖ್ಯ ಅತಿಥಿಗಳಾಗಿ ಬರಲಿ ಎಂದು ಆಶಿಸಿದ್ದೆ. ಸಾಮಾನ್ಯವಾಗಿ ನಮ್ಮ ಗೋಮಿನಿ ಪ್ರಕಾಶನದ ಯಾವುದೇ ಕಾರ್ಯಕ್ರಮಕ್ಕೂ ಒಮ್ಮೆ ಅತಿಥಿಗಳಾಗಿ ಬಂದವರನ್ನು ಅತಿಥಿಗಳಾಗೇ ಮತ್ತೆ ಕರೆಯಬಾರದೆಂಬ ಅಲಿಖಿತ ನಿಯಮವಿದ್ದರೂ ಅವರ ಮೇಲಿನ ಅಭಿಮಾನದಿಂದ ನಾವು ಅಂದು ಅವರ ಮನೆಯಲ್ಲಿದ್ದವು.         ಅಂದು ಅವರ ಮನೆಯಲ್ಲಿ ನನ್ನ ಶ್ರೀಮತಿಯ ಕಣ್ಣಿಗೆ ರಜನಿ ನರಹಳ್ಳಿಯವರ ‘ ಆತ್ಮವೃತ್ತಾಂತ ’ (ಕಾದ