ಪೋಸ್ಟ್‌ಗಳು

ನವೆಂಬರ್, 2019 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಕನ್ನಡದ ಮೇಲಿನ ಅನನ್ಯ ಪ್ರೀತಿಯ ಜೊತೆಗೆ

(ವಿಶೇಷ ಸೂಚನೆ: ಈ ಪೋಸ್ಟನ್ನು ಪೂರ್ತಿ ಓದಿ, ನಿಮ್ಮ ಅನಿಸಿಕೆ ಕಾಮೆಂಟಿಸಿ. ಇದು ನಿಮಗೆ ಪಾಠವಾದರೂ ಆಗಬಹುದು! ಯಾರಿಗೊತ್ತು?) ಕನ್ನಡದ ಮೇಲಿನ ಅನನ್ಯ ಪ್ರೀತಿಯ ಜೊತೆಗೆ ನಾನು ಓದಿದ್ದು ಸಂಸ್ಕೃತ ಸಾಹಿತ್ಯ ಮತ್ತು ಇಂಗ್ಲೀಷ್ ಸಾಹಿತ್ಯ. ಪದವಿಯವರೆಗೆ ಸಂಸ್ಕೃತವನ್ನು ಮೊದಲ ಭಾಷೆಯಾಗಿ ಕಲಿತವನಿಗೆ ಅದರ ಸಾಹಿತ್ಯ ಇವತ್ತಿಗೂ ಕಾಡುತ್ತಿದೆ. ಆ ನಂತರ ಸಾಹಿತ್ಯದ ಮೇಲಿನ ಪ್ರೀತಿಯಿಂದ ಕನ್ನಡ ಸಾಹಿತ್ಯವನ್ನು ಹಾಗೇ ಓದಿಕೊಳ್ಳಬಹುದು ಎಂದು ಭಾವಿಸಿ ಇಂಗ್ಲೀಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಇದರಿಂದ ಕೆಲಸವೂ ಸಿಗಬಹುದು ಎಂಬ ಪುಟ್ಟ ಆಸೆಯೂ ಇತ್ತು. ಆದರೆ, ಆಗಾಗ ಕನ್ನಡ ಸಾಹಿತ್ಯವನ್ನು ಓದುವುದನ್ನು ಬಿಡಲಿಲ್ಲ. ಬರೆಯಲು ಶುರುಮಾಡಿದ ಮೇಲೆ ಕತೆಗಳನ್ನು ಅರಿಯಲು ಬಹಳಷ್ಟು ಕತೆಗಳನ್ನು ಓದಿದೆ. ಆದರೂ ಬರೆಯಲು ಸಾಕಷ್ಟು ಕಷ್ಟವಾಗುತ್ತಿತ್ತು. ಆಗ ನಾನು ಕಂಡುಕೊಂಡ ಉಪಾಯವೇನೆಂದರೆ ಇಂಗ್ಲೀಷ್ ಕತೆಗಳನ್ನು ಕನ್ನಡಕ್ಕೆ ಅನುವಾದಿಸುವುದು. ಇದುವರೆವಿಗೂ ಕೆಲವು ಕತೆಗಳನ್ನು ಅನುವಾದಿಸಿ ಅವು ಪ್ರಕಟಗೊಂಡಿವೆ. ಮೊತ್ತ ಮೊದಲ ಅನುವಾದದ ಕತೆ ಪ್ರಕಟವಾದದ್ದು ಉದಯವಾಣಿಯಲ್ಲಿ. ಈ ವಿಷಯ ನನಗೆ ಮೊದಲು ಗೊತ್ತಾದ್ದದ್ದು ಮೂರು ತಿಂಗಳ ನಂತರ! ಅದನ್ನು ಮೊದಲು ನನಗೆ ತಿಳಿಸಿದ್ದು ಉದಯ್ ಇಟಗಿ ಸರ್. ಅವರು ಅಂದು ಮಧ್ಯರಾತ್ರಿ (ಆಗ ಫೇಸ್ ಬುಕ್ ಹೊಸದು) ಫೇಸ್ ಬುಕ್ ನೋಡುತ್ತಿದ್ದಾಗ ಚಾಟ್ ನಲ್ಲಿ ವಿಷಯ ತಿಳಿಸಿದರು. ಆಗ ನನಗಾದ ಖುಷಿ ಅಷ್ಟಿಷ್ಟ