ಗುರುವಾರ, ಮೇ 9, 2024

ಈ ಸ್ಪರ್ಧೆಗೆ ಮೇ 23 ಕಡೇ ದಿನ...

ಕರ್ನಾಟಕ ಲೇಖಕಿಯರ ಸಂಘವು ವಿವಿಧ ದತ್ತಿನಿಧಿಗಳ ಪ್ರಶಸ್ತಿಗಳಿಗಾಗಿ ಲೇಖಕಿಯರಿಂದ ಕೃತಿಗಳನ್ನು ಆಹ್ವಾನಿಸಿದೆ. 



ಪ್ರಶಸ್ತಿಗಳು ನಗದು ಹಾಗೂ ಪ್ರಶಸ್ತಿ ಫಲಕಗಳನ್ನು ಹೊಂದಿರುತ್ತವೆ. ಆಯ್ಕೆಯಾದ ಕೃತಿಗಳಿಗೆ ದಿ.23.06.2024 ರಂದು ಭಾನುವಾರ  ಬೆಳಿಗ್ಗೆ 10.00 ಗಂಟೆಗೆ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆಯಲಿರುವ  ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷರಾದ ಡಾ. ಎಚ್.ಎಲ್.ಪುಷ್ಪ ತಿಳಿಸಿದ್ದಾರೆ.

(2023ರ ಜನವರಿಯಿಂದ 2023ರ ಡಿಸೆಂಬರ್‌ವರೆಗೆ ಪ್ರಕಟಗೊಂಡ ಕೃತಿಗಳನ್ನು ಮಾತ್ರ ಪರಿಗಣಿಸಲಾಗುವುದು.)

ದತ್ತಿ ಪ್ರಶಸ್ತಿಗಳು:

1. ಕಾಕೋಳು ಸರೋಜಮ್ಮ(ಕಾದಂಬರಿ)  - 1000 ರೂ.

2.  ಭಾಗ್ಯ ನಂಜಪ್ಪ (ವಿಜ್ಞಾನ ಸಾಹಿತ್ಯ,) - 5000 ರೂ

3. ನಾಗರತ್ನ ಚಂದ್ರಶೇಖರ್ (ಲಲಿತ ಪ್ರಬಂಧ) - 5000 ರೂ

4. ಜಿ.ವಿ. ನಿರ್ಮಲ (ಭಾರತದ ಯಾವುದೇ  ಭಾಷೆಯ ಅನುವಾದಿತ ಕಾದಂಬರಿ/ ಕಥಾ ಸಂಕಲನ/ ಜೀವನ ಚರಿತ್ರೆ) - 5000 ರೂ.

5. ತ್ರಿವೇಣಿ ಸಾಹಿತ್ಯ ಪುರಸ್ಕಾರ

( ಪ್ರಾಯೋಜಕರು - ಸುಧಾಮೂರ್ತಿ-  ಸಣ್ಣಕಥೆ/ ಕಾದಂಬರಿ) -2000 ರೂ.

6. ಕಮಲಾ ರಾಮಸ್ವಾಮಿ (ಪ್ರವಾಸ ಸಾಹಿತ್ಯ) -1500 ರೂ

7. ನುಗ್ಗೆಹಳ್ಳಿ ಪಂಕಜ (ಹಾಸ್ಯ ಕೃತಿ) - 1000 ರೂ.

8.  ಗುಣಸಾಗರಿ ನಾಗರಾಜ್ (ಮಕ್ಕಳ ಸಾಹಿತ್ಯ.) -2000 ರೂ.

9. ಇಂದಿರಾ ವಾಣಿರಾವ್  (ನಾಟಕ) -1000 ರೂ.

10. ಜಯಮ್ಮ ಕರಿಯಣ್ಣ (ಸಂಶೋಧನೆ) -1000 ರೂ.

11. ತ್ರಿವೇಣಿ ದತ್ತಿನಿಧಿ ( ಕಥೆ/ ಕಾದಂಬರಿ- ಪ್ರಥಮ, ದ್ವಿತೀಯ, ತೃತೀಯ) - 

ಪ್ರಥಮ- 3000

ದ್ವಿತೀಯ ಬಹುಮಾನ- 2000, ತೃತೀಯ - 1000 ರೂ

12. ಉಷಾ. ಪಿ. ರೈ ( ಕವನ ಸಂಕಲನ )- (2020- 2021- 2022 ಈ ಮೂರು ವರ್ಷಗಳಲ್ಲಿ ಪ್ರಕಟಗೊಂಡ ಕವನ ಸಂಕಲನ ) - 5000 ರೂ.

13. ನಿರುಪಮಾ 

1. ಡಿಜಿಟಲ್ ಮಾಧ್ಯಮದಲ್ಲಿ ಪ್ರಕಟಗೊಂಡ ಕಥೆಗಳು- 2500 ರೂ

2. ಮುದ್ರಣ ಮಾಧ್ಯಮದಲ್ಲಿ ಪ್ರಕಟಗೊಂಡ ಕಥೆಗಳು- 2500 ರೂ


ನಿಯಮಗಳು :

* ದತ್ತಿ ಬಹುಮಾನಕ್ಕಾಗಿ ಲೇಖಕಿಯರು, ಸಾಹಿತ್ಯಾಸಕ್ತರು ಮೇಲೆ ಸೂಚಿಸಿರುವ ಯಾವುದೇ ಪ್ರಕಾರಗಳಿಗೆ ಕೃತಿಗಳನ್ನು ಕಳುಹಿಸಬಹುದು. ಬಹುಮಾನಕ್ಕಾಗಿ ಕಳುಹಿಸುವ ಕೃತಿಗಳೊಂದಿಗೆ ಈ ಕೆಳಕಂಡ ವಿವರಗಳನ್ನುಳ್ಳ ಪತ್ರವನ್ನು ಕಳುಹಿಸಬೇಕು.

* ಲೇಖಕಿಯರ ಹೆಸರು, ಅಂಚೆವಿಳಾಸ, ಫೋನ್ ನಂ. ಇಮೇಲ್ ವಿಳಾಸ, ಕೃತಿ ಶೀರ್ಷಿಕೆ, ಪ್ರಕಟಣೆ ವರ್ಷ ಬರೆಯಬೇಕು.

* ಕೃತಿಗಳ ಮೇಲೆ ಆಯಾ ದತ್ತಿನಿಧಿಯ ಹೆಸರು ಬರೆಯಬೇಕು.

* ಲೇಖಕಿಯರು ತಮ್ಮ 3 ಕೃತಿಗಳನ್ನು ಕಳುಹಿಸಬೇಕು.

* ಈಗಾಗಲೇ ಎರಡು ಪುಸ್ತಕ ಬಹುಮಾನ ಪಡೆದ ಲೇಖಕಿಯರ ಕೃತಿಗಳನ್ನು ಬಹುಮಾನಕ್ಕಾಗಿ ಪರಿಗಣಿಸಲಾಗುವುದಿಲ್ಲ.

* ಸಂಪಾದಿತ ಕೃತಿಗಳನ್ನು ಹಾಗೂ ಪಿ.ಎಚ್.ಡಿ. ಪ್ರಬಂಧಗಳನ್ನು ಬಹುಮಾನಕ್ಕಾಗಿ ಪರಿಗಣಿಸಲಾಗುವುದಿಲ್ಲ.

* ಬಹುಮಾನಕ್ಕೆ ಲೇಖಕಿಯರ ಕೃತಿಗಳನ್ನು ಮಾತ್ರ ಪರಿಗಣಿಸಲಾಗುವುದು. ಕೃತಿಯ ಪ್ರಥಮ ಆವೃತ್ತಿಯನ್ನು ಮಾತ್ರ ಪರಿಗಣಿಸಲಾಗುವುದು.

* ಪ್ರತಿ ಪುಸ್ತಕ ಬಹುಮಾನ ಆಯ್ಕೆ ಸಮಿತಿಯಲ್ಲಿ ಮೂವರು ಖ್ಯಾತ ಸಾಹಿತಿಗಳು ಇರುತ್ತಾರೆ. ಅವರು ನೀಡಿದ ತೀರ್ಪಿನ ಪ್ರಕಾರ ಕೃತಿಯನ್ನು ಬಹುಮಾನಕ್ಕಾಗಿ ಪರಿಗಣಿಸಲಾಗುವುದು.

* ಕರ್ನಾಟಕ ಲೇಖಕಿಯರ ಸಂಘ ದತ್ತಿನಿಧಿ ಪುಸ್ತಕ ಬಹುಮಾನ ವಿತರಣೆ ಸಮಾರಂಭದಲ್ಲಿ ಬಹುಮಾನ ಪಡೆದ ಕೃತಿಗಳ ಲೇಖಕಿಯರನ್ನು ಗೌರವಿಸಿ ಬಹುಮಾನ ನೀಡಲಾಗುವುದು.

* ದಯವಿಟ್ಟು ಕೃತಿಗಳನ್ನು ದಿ.  23.05.2024 (ಮೇ 23) ರ ಒಳಗೆ ತಲುಪುವಂತೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸುವುದು. ತಡವಾಗಿ ಬಂದ ಕೃತಿಗಳನ್ನು ಪರಿಗಣಿಸಲಾಗುವುದಿಲ್ಲ.

* ಕೃತಿಗಳು ತಲುಪಬೇಕಾದ ವಿಳಾಸ:  ಕರ್ನಾಟಕ ಲೇಖಕಿಯರ ಸಂಘ (ರಿ) ಬೆಂಗಳೂರು, 206, 2ನೇ ಮಹಡಿ, ವಿಜಯ ಮ್ಯಾನ್ ಶನ್, 2ನೇ ತಿರುವು, 2ನೇ ಮುಖ್ಯರಸ್ತೆ, ಚಾಮರಾಜಪೇಟೆ ಬೆಂಗಳೂರು -560018

ಮುಹೂರ್ತ


 

ಇಸ್ತಾನ್‌ಬುಲ್ಲಿಗೆ ಸುಮಾರು ಎರಡು ಘಂಟೆಯ ಪ್ರಯಾಣ ವೇಳೆ ತಗಲುವ ಒಂದು ಹಳ್ಳಿಯಲ್ಲಿ ಅಲ್ಲಾದ್ದೀನ್ ಎಂಬ ಶ್ರೀಮಂತ ವ್ಯಾಪಾರಿಯಿದ್ದ. ಆತನ ಬಳಿ ಹಲವು ಸೇವಕರಿದ್ದರು. ಅವರಲ್ಲಿ ಮುಸ್ತಾಫನೂ ಒಬ್ಬ. ಆತ ತನ್ನ ಒಡೆಯನಿಗೆ ಬಹಳ ಬೇಕಾದವನಾಗಿದ್ದ.

ಒಂದು ದಿನ ಅಲ್ಲಾದ್ದೀನ್ ಮುಸ್ತಾಫನನ್ನೂ ಏನೋ ತರಲು ಮಾರ್ಕೆಟ್ಟಿಗೆ ಕಳುಹಿಸಿದ್ದ. ಹೋದ ಸ್ವಲ್ಪ ಹೊತ್ತಿನಲ್ಲಿಯೇ ಮುಸ್ತಾಫನು ಬೆವರುತ್ತಾ ಭಯಭೀತನಾಗಿ ಹಿಂದಿರುಗಿ ಬಂದಿದ್ದ. ಇದನ್ನು ಕಂಡ ಅಲ್ಲಾದ್ದೀನ್ ಕಾರಣ ಕೇಳಲು, ಕಾರಣ ಆಮೇಲೆ ಹೇಳುತ್ತೇನೆಂದ ಮುಸ್ತಾಫಾ ತನ್ನ ಒಡೆಯನ ಕುದುರೆಯನ್ನು ಕೇಳಿ ಪಡೆದು ಅದನ್ನು ಹತ್ತಿ ವೇಗವಾಗಿ ಇಸ್ತಾನ್‌ಬುಲ್ ಕಡೆಗೆ ಮಿಂಚಿನ ವೇಗದಲ್ಲಿ ಹೋಗಿಯೇ ಬಿಟ್ಟ.

ಅಲ್ಲಾದ್ದೀನನಿಗೆ ಇದೆಲ್ಲಾ ವಿಚಿತ್ರವಾಗಿ ಕಂಡಿತ್ತು. ಮಾರ್ಕೆಟ್ಟಿನಲ್ಲಿ ಏನೋ ವಿಚಿತ್ರ ಘಟನೆ ನಡೆದಿರಬಹುದೆಂದು ಊಹಿಸಿ ಅಲ್ಲಿಗೆ ಹೋದರೆ ಅಲ್ಲಿ ಯಮಧರ್ಮರಾಯ ಸುತ್ತಾಡುತ್ತಿದ್ದಾನೆ! ಆಶ್ಚರ್ಯದಿಂದ ಯಮನು ಯಾರನ್ನೋ ಹುಡುಕುತ್ತಿದ್ದಾನೆ. ಇದನ್ನು ಗಮನಿಸಿದ ಅಲ್ಲಾದ್ದೀನ್ ನೇರವಾಗಿ ಯಮನಲ್ಲಿಗೆ ಹೋಗಿ ಆತ ಅಲ್ಲಿ ಸುತ್ತಾಡುತ್ತಿರುವ ಕಾರಣವೇನು ಎಂದು ಕೇಳುತ್ತಾನೆ. ಆಗ ಯಮನು, “ಇಲ್ಲಿ ಸ್ವಲ್ಪ ಹೊತ್ತಿಗೆ ಮುಂಚೆ ಮುಸ್ತಾಫನನ್ನು ನೋಡಿದೆ. ಆತ ಇಲ್ಲೇನು ಮಾಡುತ್ತಿದ್ದಾನೆ ಎಂದು ಯೋಚಿಸುತ್ತಿರುವಷ್ಟರಲ್ಲಿ ಆತ ಮಂಗಮಾಯವಾದ. ಯಾಕೆಂದರೆ, ಇನ್ನು ಎರಡು ಘಂಟೆಯ ನಂತರ ಆತನ ಸಾವು ಇಸ್ತಾನ್‌ಬುಲ್‌ನಲ್ಲಿ ನಿಶ್ಚಯವಾಗಿದೆ” ಎಂದು ಹೇಳಿದ.

(ಯಮನೊಂದಿಗೆ ನಮ್ಮ ಸಾವಿನ ಮುಹೂರ್ತ ಹೇಗೆ ಕೂಡಿ ಬರುತ್ತದೆ ಎಂಬುದನ್ನು ಅರಿಯಲು ಅಥವಾ ನೀತಿಗಾದರೂ ಇರುವ ಮುಸ್ತಾಫನ ಕಥೆ ಇದು - ಸಂಗ್ರಹ)

{ಎರಡು ಧರ್ಮಗಳ ಪಾತ್ರಗಳನ್ನು ಬೆಸೆದಿರುವ ಈ ಅಜ್ಞಾತ ಕತೆಗಾರನಿಗೆ ಒಂದು ನಮಸ್ಕಾರ ಅಥವಾ ಸಲಾಂ ಹೇಳಲೇಬೇಕು)

ಮಂಗಳವಾರ, ಮೇ 7, 2024

ನಿಮಗೆ ವೇದವ್ಯಾಸರ ಮಾಮನ ಕತೆ ಗೊತ್ತೇ!?

 ನಿಮಗೆ ವೇದವ್ಯಾಸರ ಮಾಮನ ಕತೆ ಗೊತ್ತೇ!?

 


ವೇದವ್ಯಾಸರು ನಿಮಗೆಲ್ಲಾ ಗೊತ್ತೇ ಇದ್ದಾರೆ. ನಿಮಗೆ ಗೊತ್ತಿಲ್ಲದ ಅವರ ಸೋದರಮಾವನ ಕತೆಯೊಂದಿದೆ. ಒಂದು ದಿನ ವೇದವ್ಯಾಸರ ಸೋದರಮಾವ (ಮುದ್ದಿನ ಮಾಮ) ವೇದವ್ಯಾಸರಲ್ಲಿಗೆ ಬಂದು ಹೇಳುತ್ತಾರೆ, “ವ್ಯಾಸ, ನಿನಗೆ ಬ್ರಹ್ಮದೇವರು ಚೆನ್ನಾಗಿಯೇ ಪರಿಚಯವಿದ್ದಾರೆ. ಎಷ್ಟಾದರೂ ನೀನು ಬ್ರಹ್ಮಪುರಾಣವನ್ನೇ ಬರೆದವನಲ್ಲವೇ! ಹೇಗಾದರು ಮಾಡಿ ಆತನಿಂದ ನನಗೊಂದು ವರವನ್ನು ಕರುಣಿಸು. ನಾನು ಚಿರಂಜೀವಿಯಾಗಲು ಬಯಸಿದ್ದೇನೆ. ದಯಮಾಡಿ ಬ್ರಹ್ಮನಿಂದ ಚಿರಂಜೀವಿಯಾಗುವಂತೆ ನನ್ನನ್ನು ಹರಸಿಬಿಡುಎಂದು ಕೋರುತ್ತಾರೆ.

ಎಷ್ಟಾದರೂ ಮುದ್ದಿನ ಮಾಮನಲ್ಲವೇ? ವೇದವ್ಯಾಸರು ಆತನನ್ನು ಬ್ರಹ್ಮನಲ್ಲಿಗೆ ಕರೆದುಕೊಂಡು ಹೋಗುತ್ತಾರೆ. ಭೇಟಿಯ ಶಿಷ್ಟಾಚಾರಗಳೆಲ್ಲಾ ಮುಗಿದ ಮೇಲೆ ವೇದವ್ಯಾಸರು ತಾವು ಅಲ್ಲಿಗೆ ಬಂದ ಕಾರಣವನ್ನು ತಿಳಿಸುತ್ತಾರೆ. ವಿಷಯ ತಿಳಿದ ಬ್ರಹ್ಮನು ತನ್ನ ಅಸಾಯಕತೆಯನ್ನು ವ್ಯಕ್ತಪಡಿಸಿ, ವಿಷ್ಣುವು ಸಂಬಂಧ ಸಹಾಯ ಮಾಡಬಹುದೆಂದು ಅವರಿಬ್ಬರನ್ನು ವಿಷ್ಣುವಲ್ಲಿಗೆ ಕರೆದೊಯ್ಯುತ್ತೇನೆ ಎನ್ನುತ್ತಾರೆ. ಮಾತನ್ನು ಆಲಿಸಿದ ಸರಸ್ವತಿಯು, ತಾನೂ ಬರುವುದಾಗಿಯೂ, ಹಾಗೇ ಸೋದರಿ ಲಕ್ಷ್ಮಿಯನ್ನು ನೋಡಿಕೊಂಡು, ಅವಳ ಹೊಸ ಒಡವೆಗಳನ್ನು ನೋಡುವ ಇಂಗಿತವನ್ನು ವ್ಯಕ್ತಪಡಿಸುತ್ತಾಳೆ. ಒಪ್ಪಿದ ಬ್ರಹ್ಮನು ಮೂವರನ್ನು ಕರೆದುಕೊಂಡು ವಿಷ್ಣುವಿನ ಸನ್ನಿಧಾನಕ್ಕೆ ಬರುತ್ತಾರೆ. ಕಾರಣ ತಿಳಿದ ವಿಷ್ಣುವು ತಾನೂ ವಿಷಯದಲ್ಲಿ ಅಸಾಯಕನಾಗಿರುವುದನ್ನು ತಿಳಿಸಿ, ಮಹೇಶ್ವರನು ಚಿರಂಜೀವಿ ವರವನ್ನು ಕರುಣಿಸಬಹುದೆಂದು ತಿಳಿಸಿ ಆತನಲ್ಲಿಗೆ ಹೊರಡಲು ಅನುವಾಗುತ್ತಾನೆ. ಆಗ ಲಕ್ಷ್ಮಿ ಮತ್ತು ಸರಸ್ವತಿಯರೂ ತಾವೂ ಬಂದು ಪಾರ್ವತಿಯನ್ನು ಮಾತನಾಡಿಸಿಕೊಂಡು ಬರುತ್ತೇವೆ ಎಂದು ಹೊರಡುತ್ತಾರೆ. ಆರು ಜನ ಕೈಲಾಸಕ್ಕೆ ಬಂದು ತಮ್ಮ ಆಗಮನದ ವಿಷಯವನ್ನು ಶಿವನಿಗೆ ಹೇಳುತ್ತಾರೆ. ತಾಳ್ಮೆಯಿಂದ ಕೇಳಿಸಿಕೊಂಡ ಶಿವ, ಇದು ತನ್ನ ಅಧೀನನಾದ ಯಮನೊಬ್ಬನಿಂದಲೇ ಸಾಧ್ಯವೆಂದು ತಿಳಿಸಿ, ಅಲ್ಲಿಗೆ ಯಮರಾಜನನ್ನು ಕರೆಸುತ್ತಾನೆ. ಕ್ಷಣಾರ್ಧದಲ್ಲಿ ಬಂದ ಯಮರಾಜ ವೇದವ್ಯಾಸರ ಮಾಮನ ಆಯುಷ್ಯದ ವಿವರಗಳು ಚಿತ್ರಗುಪ್ತನ ಲ್ಯಾಪ್ಟಾಪ್ಪಿನಲ್ಲಿ ಇರುವುದಾಗಿ ಹೇಳಿ ಅವರನ್ನು ಕೋರಬೇಕೆಂದು ಹೇಳುತ್ತಾನೆ. ಸಮಯದಲ್ಲಿ ಚಿತ್ರಗುಪ್ತ ಕಾಶಿಗೆ ಹೋಗಿದ್ದರಿಂದ ಆತ ಬರುವುದು ಸ್ವಲ್ಪ ತಡವಾಗುತ್ತದೆ. ಅಷ್ಟರಲ್ಲಿ ಎಲ್ಲರ ಪರಸ್ಪರ ಉಭಯ ಕುಶಲೋಪಚಾರ ನಡೆದು ಊಟವೂ ಮುಗಿದಿರುತ್ತದೆ. ಚಿತ್ರಗುಪ್ತನು ಬಂದ ಕ್ಷಣವೇ ಯಮರಾಜನು ವೇದವ್ಯಾಸರ ಮಾಮನ ಮರಣ ದಿನಾಂಕವನ್ನು ತಿಳಿಸುವಂತೆ ಕೋರುತ್ತಾನೆ. ಒಂದೆರಡು ನಿಮಿಷ ತಮ್ಮ ಲ್ಯಾಪ್ಟಾಪ್ಪಿನಲ್ಲಿ ವಿವರಗಳನ್ನು ಹುಡುಕುವ ಚಿತ್ರಗುಪ್ತರು ಒಮ್ಮೆಗೆ, “ಅಯ್ಯೋ...!” ಎಂದು ಕಿರುಚುತ್ತಾರೆ. ಕ್ಷಣವೇ ವೇದವ್ಯಾಸರ ಮಾಮ ಅಲ್ಲೇ ಅಸುನೀಗುತ್ತಾರೆ. ಎಲ್ಲರೂ ಆಶ್ಚರ್ಯಚಕಿತರಾದಾಗ ಯಮರಾಜನು ಚಿತ್ರಗುಪ್ತರ ಲ್ಯಾಪ್ಟಾಪ್ಪಿನಲ್ಲಿ ತೆರೆದಿದ್ದ ಫೈಲನ್ನು ನೋಡುತ್ತಾನೆ. ಅದರಲ್ಲಿ, ʼಯಾವ ದಿನ ಬ್ರಹ್ಮ ಮತ್ತು ಸರಸ್ವತಿ, ವಿಷ್ಣು ಮತ್ತು ಲಕ್ಷ್ಮಿ, ಶಿವ ಮತ್ತು ಪಾರ್ವತಿ, ಯಮರಾಜ ಮತ್ತು ಚಿತ್ರಗುಪ್ತ ಹಾಗೂ ವೇದವ್ಯಾಸರು ಮತ್ತವರ ಮಾಮ ಸೇರುತ್ತಾರೋ ಅಂದೆ ವೇದವ್ಯಾಸರ ಮಾಮನ ಕಡೆಯ ದಿನʼವೆಂದು ದಾಖಲಾಗಿರುತ್ತದೆ.

 

"ಮಾದೇವ"ನ ಯಶಸ್ವಿ ಪ್ರದರ್ಶನ...

 ಸ್ನೇಹಿತರೇ, ನಟ ವಿನೋದ್‌ ಪ್ರಭಾಕರ್‌ ಅಭಿನಯದ "ಮಾದೇವ" ಸಿನಿಮಾ ಜೂನ್‌ 6ರಂದು ಬಿಡುಗಡೆಯಾಯಿತು. ನವೀನ್‌ ರೆಡ್ಡಿ ಬಿ. ಅವರ ನಿರ್ದೇಶನದ ಈ ಸಿನಿಮಾವನ್ನು ನಾ...