ಸೋಮವಾರ, ಏಪ್ರಿಲ್ 29, 2024

ವಿವಿಧ ದತ್ತಿ ಪುಸ್ತಕ ಪುರಸ್ಕಾರಗಳು...

ವಿವಿಧ ದತ್ತಿ ಪುಸ್ತಕ ಪುರಸ್ಕಾರಗಳು...

ಕನ್ನಡ ಸಾಹಿತ್ಯ ಪರಿಷತ್ತು 2023ನೇ ಸಾಲಿನಲ್ಲಿ ಪುಸ್ತಕಗಳಿಗೆ ನೀಡಲಾಗುವ ವಿವಿಧ ದತ್ತಿ ಪುರಸ್ಕಾರಗಳಿಗಾಗಿ ಕೃತಿಗಳನ್ನು ಆಹ್ವಾನಿಸಿದೆ.



2023 ಜನವರಿ 1 ರಿಂದ ಡಿಸೆಂಬರ್ 31ರೊಳಗೆ ಪ್ರಕಟಗೊಂಡ ಪುಸ್ತಕಗಳನ್ನು ಲೇಖಕರು ಅಥವಾ ಪ್ರಕಾಶಕರು ಕಳಿಸಿಕೊಡಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾಮಹೇಶ ಜೋಶಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2023ನೇ ಸಾಲಿನಲ್ಲಿ ಪ್ರಕಟಗೊಂಡಿರುವ ಒಟ್ಟು 53 ವಿವಿಧ ಪುಸ್ತಕಗಳಿಗೆ ದತ್ತಿ ಪುರಸ್ಕಾರಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ನೀಡುತ್ತಿದೆ. ಅದಕ್ಕಾಗಿ ಅನೇಕ ದತ್ತಿ ದಾನಿಗಳು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿ ನಿಧಿಯನ್ನು ಸ್ಥಾಪಿಸಿದ್ದು ಒಟ್ಟಾರೆ 57ವಿವಿಧ ಪ್ರಕಾರಗಳ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.



ಪ್ರತಿ ದತ್ತಿ ಪ್ರಶಸ್ತಿಯ ಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು, ಯಾವ ದತ್ತಿಗಾಗಿ ಎನ್ನುವುದನ್ನು ಪುಸ್ತಕದ ಮೊದಲ ಪುಟದಲ್ಲಿ ಸ್ಪಷ್ಟವಾಗಿ ಬರೆದುಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ ಬೆಂಗಳೂರು-560 018’ ಅವರಿಗೆ ಕಳುಹಿಸಲು ಪ್ರಕಟಣೆಯಲ್ಲಿ ಕೋರಿದೆ.



ಸ್ಪರ್ಧೆಗೆ ಅನ್ವಯಿಸುವ ನಿಯಮಗಳು:
1) ಪ್ರತಿ ಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು- 560 018. ದಿನಾಂಕ: 31-05-2024 ಒಳಗೆ ತಲುಪುವಂತೆ ಕಳುಹಿಸಬೇಕು. ತಡವಾಗಿ ಬಂದ ಪುಸ್ತಕಗಳನ್ನು ಸ್ವೀಕರಿಸಲಾಗುವುದಿಲ್ಲ
2) ಪರಿಶೀಲನೆಗೆ ಬಂದ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ
3) ಬಹುಮಾನದ ಬಗ್ಗೆ ಪರಿಷತ್ತು ತಾನು ನೇಮಿಸುವ ತೀರ್ಪುಗಾರರು ನೀಡುವ ಶಿಫಾರಸ್ಸನ್ನು ಗಮನಿಸಿ ಅಂತಿಮ ನಿರ್ಧಾರವನ್ನು ಕೈಗೊಳ್ಳುತ್ತದೆ.
4) ಯಾವುದೇ ಪುಸ್ತಕ ಪ್ರಶಸ್ತಿ ಪುರಸ್ಕೃತರು ತಾವು ಪ್ರಶಸ್ತಿ ಪಡೆದ ವಿಭಾಗಕ್ಕೆ 3 ವರ್ಷ ಅರ್ಜಿ ಸಲ್ಲಿಸುವಂತಿಲ್ಲ.
5) ಯಾವುದೇ ಪುಸ್ತಕ ದತ್ತಿ ಪುರಸ್ಕಾರ ಬರಹಗಾರರಿಗೆ ಯಾವುದೇ ಪ್ರಕಾರದಲ್ಲಾಗಲಿ ಮೂರು ಸಲ ಪ್ರಶಸ್ತಿ ಬಂದಿದ್ದೇ ಆದರೆ, ಜೀವಮಾನ ಪೂರ್ತಿ ಕನ್ನಡ ಸಾಹಿತ್ಯ ಪರಿಷತ್ತಿನ ಪುಸ್ತಕ ದತ್ತಿ ಪುರಸ್ಕಾರಕ್ಕೆ ಅವರು ಅರ್ಜಿ ಸಲ್ಲಿಸುವಂತಿಲ್ಲ.
6) ಯಾವುದೇ ಪ್ರಶಸ್ತಿಗೆ ಅರ್ಹ ಗ್ರಂಥಗಳು ಬಾರದಿದ್ದಾಗ ವರ್ಷ ಪ್ರಶಸ್ತಿಯನ್ನು ನೀಡದಿರುವ ಹಕ್ಕು ಪರಿಷತ್ತಿಗೆ ಇರುತ್ತದೆ.
7) ಒಂದಕ್ಕಿತ ಹೆಚ್ಚು ಗ್ರಂಥಗಳು ಅತ್ಯುತ್ತಮವೆಂದು ಪರಿಗಣಿತವಾದರೆ ಬಹುಮಾನದ ಹಣವನ್ನು ಹಂಚಿ ವಿತರಿಸುವ ಹಕ್ಕು ಪರಿಷತ್ತಿಗೆ ಇರುತ್ತದೆ.
8) ಪಿಎಚ್.ಡಿ. ಗ್ರಂಥಗಳು ಹಾಗೂ ನಿಘಂಟುಗಳನ್ನು ಸ್ಪರ್ಧೆಗೆ ಪರಿಗಣಿಸುವುದಿಲ್ಲ
9) ಭಾಗವಹಿಸುತ್ತಿರುವ ಸ್ಪರ್ಧೆಯ ದತ್ತಿ ಹೆಸರನ್ನು ಪುಸ್ತಕದ ಮೊದಲ ಒಳಪುಟದಲ್ಲಿ ಸ್ಪಷ್ಟವಾಗಿ ಸೂಚಿಸತಕ್ಕದ್ದು.
10) ಸ್ಪರ್ಧೆಯಲ್ಲಿ ಭಾಗವಹಿಸುವವರು ತಮ್ಮ ಹೆಸರು ವಿಳಾಸ, ದೂರವಾಣಿ ಹಾಗೂ ಮೊಬೈಲ್ ಸಂಖ್ಯೆಗಳನ್ನು ನಮೂದಿಸಬೇಕು. ಹಿಂದೆ ದತ್ತಿ ಪ್ರಶಸ್ತಿ ಬಂದಿದ್ದರೆ ಅದರ ವಿವರಗಳನ್ನೂ ಸ್ಪಷ್ಟವಾಗಿ ದಾಖಲಿಸ ಬೇಕು.
11) ಪ್ರತಿ ಪುಸ್ತಕ ದತ್ತಿ ಪ್ರಶಸ್ತಿಗಳಿಗೂ ತಲಾ ಮೂರು ಪ್ರತಿಗಳನ್ನು ಕಳುಹಿಸಬೇಕು.
12) ಪುಸ್ತಕ ದತ್ತಿ ಪ್ರಶಸ್ತಿಗೆ ಪುಸ್ತಕಗಳನ್ನು ಕಳುಹಿಸುವವರು ಸಮಗ್ರ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯತ್ವವನ್ನು ಹೊಂದಿರಬೇಕು. ಪುಸ್ತಕ ಕಳುಹಿಸುವಾಗ ತಮ್ಮ ಸದಸ್ಯತ್ವ ಸಂಖ್ಯೆಯನ್ನು ನಮೂದಿಸಿ ಕಳುಹಿಸಬೇಕು. ಒಂದು ವೇಳೆ ಇನ್ನೂ ಸದಸ್ಯರಾಗಿರದಿದ್ದಲ್ಲಿ ಪರಿಷತ್ತಿನ ಆಜೀವ ಸದಸ್ಯತ್ವವನ್ನು ಪಡೆದುಕೊಂಡು ವಿವರಗಳೊಂದಿಗೆ ಅರ್ಜಿ ಸಲ್ಲಿಸ ಬಹುದು.


13) ದತ್ತಿಯ ವಿವರಗಳಿಗಾಗಿ ಐದು ರೂಪಾಯಿಯ ಅಂಚೆಚೀಟಿಯನ್ನು ಲಗತ್ತಿಸಿದ ಕವರ್ ಅನ್ನು ಕನ್ನಡ ಸಾಹಿತ್ಯ ಪರಿಷತ್ತಿಗೆ ಕಳುಹಿಸಿ ವಿವರಗಳನ್ನು ಪಡೆಯ ಬಹುದು ಇಲ್ಲದಿದ್ದರೆ ಕನ್ನಡ ಸಾಹಿತ್ಯ ಪರಿಷತ್ತಿನ ಅಂತರ್ಜಾಲ ತಾಣಗಳಾದ
ಫೇಸ್ ಬುಕ್ : https://www.facebook.com/kasapaofficial,
https://www.facebook.com/KannadaSahityaParishattu
ಟ್ವಿಟರ್ : https://twitter.com/kannadaparishat
ಕೂ ಆಪ್ : https://www.kooapp.com/profile/kasapa
ಇನ್ ಸ್ಟಾಗ್ರಾಮ್ : https://www.instagram.com/kannadasahityaparishattu
ವೆಬ್ ಸೈಟ್ : https://kannadasahithyaparishattu.in

www.kasapa.in ಅಥವಾ ದೂರವಾಣಿ ಸಂಖ್ಯೆ 080-26612991/26623584 ಇವುಗಳ ಮೂಲಕವೂ ಮಾಹಿತಿಯನ್ನು ಪಡೆಯ ಬಹುದಾಗಿದೆ.

ಭಾನುವಾರ, ಏಪ್ರಿಲ್ 28, 2024

ಈ ಪ್ರತಿಷ್ಠಿತ ಕಥಾ ಮತ್ತು ಕಾದಂಬರಿ ಸ್ಪರ್ಧೆಗೆ ಇನ್ನೇರಡೇ ದಿನ ಬಾಕಿ…

 ಈ ಪ್ರತಿಷ್ಠಿತ ಕಥಾ ಮತ್ತು ಕಾದಂಬರಿ ಸ್ಪರ್ಧೆಗೆ ಇನ್ನೇರಡೇ ದಿನ ಬಾಕಿ…



ನಾಡಿನ ಪ್ರತಿಷ್ಠಿತ ʻಬುಕ್ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ 2024 ಮತ್ತು ಕಾದಂಬರಿ ಪುರಸ್ಕಾರ 2024ʼಕ್ಕೆ ಅರ್ಜಿ ಸಲ್ಲಿಸಲು ಇನ್ನೆರಡೇ ದಿನ ಬಾಕಿ.

ವಿವರಗಳು...

ರೂ. 2 ಲಕ್ಷ 69 ಸಾವಿರ ಬಹುಮಾನ!

ಬುಕ್ ಬ್ರಹ್ಮಸ್ವಾತಂತ್ರ್ಯೋತ್ಸವ ಕಥಾ ಸ್ಫರ್ಧೆಹಾಗೂ 2023ನೇ ಸಾಲಿನಲ್ಲಿ ಪ್ರಕಟವಾದ ಕಾದಂಬರಿಗೆ ಪುರಸ್ಕಾರ ನೀಡಲು ನಿರ್ಧರಿಸಿದೆ.

2023ನೇ ಸಾಲಿನಲ್ಲಿ ಪ್ರಕಟಗೊಂಡಿರುವ ಅತ್ಯುತ್ತಮ ಕಾದಂಬರಿಗೆ ಒಂದು ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು. ಒಂದು ಲಕ್ಷದಲ್ಲಿ 75 ಸಾವಿರ ರೂಪಾಯಿ ಲೇಖಕರಿಗೆ ಹಾಗೂ 25 ಸಾವಿರ ಪ್ರಕಾಶಕರಿಗೆ ವಿತರಿಸಲಾಗುತ್ತದೆ. ಮೆಚ್ಚುಗೆ ಪಡೆಯುವ ನಾಲ್ಕು ಕಾದಂಬರಿಗಳಿಗೆ ತಲಾ 5 ಸಾವಿರ ರೂಪಾಯಿ ಬಹುಮಾನ ನೀಡಲಾಗುವುದು. ಪೈಕಿ 3 ಸಾವಿರ ರೂಪಾಯಿ ಲೇಖಕರಿಗೆ ಹಾಗೂ 2 ಸಾವಿರ ರೂಪಾಯಿಗಳನ್ನು ಪ್ರಕಾಶಕರಿಗೂ ನೀಡಲಾಗುವುದು.

ದ್ವೀತಿಯ ಸ್ಥಾನ ಪಡೆಯುವ ಕಥೆಗೆ 25 ಸಾವಿರ ರೂಪಾಯಿ, ತೃತೀಯ ಸ್ಥಾನಕ್ಕೆ 15 ಸಾವಿರ ರೂಪಾಯಿ ನಗದು ಬಹುಮಾನ ಇರಲಿದೆ. ಉಳಿದಂತೆ ಐದು ಕಥೆಗಳಿಗೆ ತಲಾ 5 ಸಾವಿರ ನಗದನ್ನು ಒಳಗೊಂಡ ಸಮಾಧಾನಕರ ಬಹುಮಾನ ಹಾಗೂ ಅಂತಿಮ ಸುತ್ತಿಗೆ ಆಯ್ಕೆಯಾಗುವ ಉಳಿದ17 ಕಥೆಗಳಿಗೆ ತಲಾ ಎರಡು ಸಾವಿರ ರೂಪಾಯಿ ನೀಡಲಾಗುತ್ತದೆ. ಆಯ್ಕೆಯಾದ 25 ಕಥೆಗಳನ್ನು ಒಳಗೊಂಡ ಪುಸ್ತಕ ಪ್ರಕಟಿಸಲಾಗುತ್ತದೆ.

 

ಬುಕ್ ಬ್ರಹ್ಮ ಕಾದಂಬರಿ ಪುರಸ್ಕಾರ 2024 ನಿಯಮಗಳು:

   1.   ಕಾದಂಬರಿಯು ಸ್ವತಂತ್ರವಾಗಿರಬೇಕು ಮತ್ತು 2023ರಲ್ಲಿ ಮೊದಲ ಮುದ್ರಣಗೊಂಡಿರಬೇಕು.
2. ಅನುವಾದ ಹಾಗೂ ಭಾಷಾಂತರಗೊಂಡ ಕಾದಂಬರಿಗಳನ್ನು ಪರಿಗಣಿಸುವುದಿಲ್ಲ.
3. ಸ್ಪರ್ಧೆಗೆ ಲೇಖಕರು/ ಪ್ರಕಾಶಕರು ಕಾದಂಬರಿಗಳ ನಾಲ್ಕು ಪ್ರತಿಗಳನ್ನು ಕಳುಹಿಸಬೇಕು.
4. ತೀರ್ಪುಗಾರರ ನಿರ್ಣಯವೇ ಅಂತಿಮ.

5. ಕಾದಂಬರಿಗಳನ್ನು ಕಳುಹಿಸಲು ಮೇ 1, 2024 ಕೊನೆಯ ದಿನ.
6. ಕನ್ನಡದ ಪ್ರಮುಖ ಕಾದಂಬರಿಕಾರರು ಹಾಗೂ ವಿಮರ್ಶಕರು ಸ್ಪರ್ಧೆಯ ನಿರ್ಣಾಯಕರಾಗಿರುತ್ತಾರೆ.
7. ಆಯ್ಕೆಗೆ ಸಂಬಂಧಿಸಿದಂತೆಬುಕ್ ಬ್ರಹ್ಮಆಡಳಿತ ಮಂಡಳಿಯ ನಿರ್ಣಯವೇ ಅಂತಿಮ.
8.
ಜುಲೈ 1, 2024 ಮಂಗಳವಾರದಂದು ಅಂತಿಮ ಸುತ್ತನ್ನು ಪ್ರವೇಶಿಸುವ 5 ಕಾದಂಬರಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು.
9.
ಮೆಚ್ಚುಗೆ ಪಡೆಯುವ ನಾಲ್ಕು ಕಾದಂಬರಿಗಳಿಗೆ ತಲಾ 5 ಸಾವಿರ ರೂಪಾಯಿ ಬಹುಮಾನ ನೀಡಲಾಗುವುದು. ಪೈಕಿ 3 ಸಾವಿರ ರೂಪಾಯಿ ಲೇಖಕರಿಗೆ ಹಾಗೂ 2 ಸಾವಿರ ರೂಪಾಯಿಗಳನ್ನು ಪ್ರಕಾಶಕರಿಗೂ ನೀಡಲಾಗುವುದು.
10.
ಆಗಸ್ಟ್ 9, 10, 11, 2024ರಂದು ನಡೆಯಲಿರುವ ಬುಕ್ ಬ್ರಹ್ಮ ಸಾಹಿತ್ಯ ಉತ್ಸವದಲ್ಲಿ ಪುರಸ್ಕೃತರ ಘೋಷಣೆ ಮತ್ತು ಪ್ರಶಸ್ತಿ ವಿತರಣೆ ಮಾಡಲಾಗುವುದು.
11. ಬುಕ್ಬ್ರಹ್ಮ ಪ್ರೈವೇಟ್ ಲಿಮಿಟೆಡ್ (Book Brahma Private Limited), ಫರ್ಬೆಂಡನ್ ಕಮ್ಯುನಿಕೇಷನ್ ಪ್ರೈವೇಟ್ ಲಿಮಿಟೆಡ್ (Verbinden Communication Private Limited) ಸಂಸ್ಥೆಗಳ ಸಿಬ್ಬಂದಿ ಹಾಗೂ ಅವರ ಕುಟುಂಬದ ಸದಸ್ಯರು ಸ್ಫರ್ಧೆಯಲ್ಲಿ ಭಾಗವಹಿಸುವಂತಿಲ್ಲ.
12. ಅಂತಿಮ ಸುತ್ತಿಗೆ ಆಯ್ಕೆಯಾದ ಕಾದಂಬರಿಕಾರರು ಬಹುಮಾನ ವಿತರಣಾ ಸಮಾರಂಭದಲ್ಲಿ ತಪ್ಪದೇ ಭಾಗವಹಿಸಬೇಕು.
13.
ಕಾದಂಬರಿಗಳ ನಾಲ್ಕು ಪ್ರತಿಗಳನ್ನು ಪ್ರಧಾನ ಸಂಪಾದಕರು, ಬುಕ್ ಬ್ರಹ್ಮ-ಕನ್ನಡ ಮೂರನೇ ಮಹಡಿ, ಆರ್. ಕೆ ಕಾಂಪ್ಲೆಕ್ಸ್, ಕೆಎಸ್ಎಸ್ಐಡಿಸಿ ಆವರಣ ಎಲೆಕ್ಟ್ರಾನಿಕ್ಸ್ ಸಿಟಿ ಮೊದಲ ಹಂತ, ಬೆಂಗಳೂರು-560 100 ವಿಳಾಸಕ್ಕೆ ಮೇ 1 ರೊಳಗೆ ಕಳುಹಿಸಬೇಕು.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 78926 08118

***

ಬುಕ್ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ 2024 ನಿಯಮಗಳು:

1. ಕಥೆಯು ಸ್ವತಂತ್ರವಾಗಿರಬೇಕು. ಅನುವಾದ, ಅನುಕರಣವಾಗಿರಬಾರದು.
2.
ಕಥೆಯು ಅಪ್ರಕಟಿತವಾಗಿರಬೇಕು. ಮುದ್ರಣ ಅಥವಾ ಯಾವುದೇ ವಿದ್ಯುನ್ಮಾನ ಮಾಧ್ಯಮ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿರಬಾರದು.
3.
ಕಥೆಗೆ ಯಾವುದೇ ರೀತಿಯ ಪದಮಿತಿ ಇರುವುದಿಲ್ಲ.
4.
ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ವಯಸ್ಸಿನ ನಿರ್ಬಂಧ ಇಲ್ಲ.
5.
ಹಸ್ತಪ್ರತಿ ಅಥವಾ ಟೈಪ್ ಮಾಡಿದ ಕಥೆಯಿರುವ ಪುಟಗಳಲ್ಲಿ ತಮ್ಮ ಹೆಸರನ್ನು ದಾಖಲಿಸಬಾರದು. ಕಥೆ ಮುಗಿದ ನಂತರ ಪ್ರತ್ಯೇಕ ಪುಟದಲ್ಲಿ ತಮ್ಮ ಹೆಸರು, ಪೂರ್ಣ ವಿಳಾಸ ಮತ್ತು ಮೊಬೈಲ್ ಸಂಖ್ಯೆ ಇರಬೇಕು.
6.
ಕಥೆಗಾರರು ನಿಬಂಧನೆಗಳಿಗೆ ಒಪ್ಪಿದ ಮತ್ತು ಸಹಿ ಮಾಡಿದ ಪ್ರತ್ಯೇಕ ಒಂದು ಪತ್ರ ಇಡಬೇಕು.
7.
ಬುಕ್ಬ್ರಹ್ಮ ಪ್ರೈವೇಟ್ ಲಿಮಿಟೆಡ್ (Book Brahma Private Limited), ಫರ್ಬೆಂಡನ್ ಕಮ್ಯುನಿಕೇಷನ್ ಪ್ರೈವೇಟ್ ಲಿಮಿಟೆಡ್ (Verbinden Communication Private Limited) ಸಂಸ್ಥೆಗಳ ಸಿಬ್ಬಂದಿ ಹಾಗೂ ಅವರ ಕುಟುಂಬದ ಸದಸ್ಯರು ಸ್ಫರ್ಧೆಯಲ್ಲಿ ಭಾಗವಹಿಸುವಂತಿಲ್ಲ.
8.
ಕನ್ನಡದ ಪ್ರಮುಖ ಕಥೆಗಾರರು/ವಿಮರ್ಶಕರು ಸ್ಪರ್ಧೆಯ ನಿರ್ಣಾಯಕರಾಗಿರುತ್ತಾರೆ.
9.
ಆಯ್ಕೆಗೆ ಸಂಬಂಧಿಸಿದಂತೆಬುಕ್ ಬ್ರಹ್ಮಆಡಳಿತ ಮಂಡಳಿಯ ನಿರ್ಣಯವೇ ಅಂತಿಮ.
10.
ಕಥೆಗಳನ್ನು ಕಳುಹಿಸಲು ಕೊನೆಯ ದಿನ ಬುಧವಾರ, ಮೇ 1, 2024.
11.
ಜುಲೈ 1, 2024 ರಂದು ಅಂತಿಮ ಸುತ್ತನ್ನು ಪ್ರವೇಶಿಸುವ 25 ಕಥೆಗಳ ಪಟ್ಟಿಯನ್ನು ಪ್ರಕಟಿಸಲಾಗುವುದು.
12. 2024
ಆಗಸ್ಟ್ 9, 10, 11 ರಂದು ನಡೆಯಲಿರುವ ಬುಕ್ ಬ್ರಹ್ಮ ಸಾಹಿತ್ಯ ಉತ್ಸವದಲ್ಲಿ ಅಂತಿಮ ಸುತ್ತಿಗೆ ಆಯ್ಕೆಯಾದ ಕಥೆಗಳ ಘೋಷಣೆ ಮತ್ತು ಪ್ರಶಸ್ತಿ ವಿತರಣೆ ಮಾಡಲಾಗುವುದು.
13.
ಅಂತಿಮ ಸುತ್ತಿಗೆ ಆಯ್ಕೆಯಾದ 25 ಕಥೆಗಳನ್ನು ಪುಸ್ತಕದ ರೂಪದಲ್ಲಿ ಪ್ರಕಟಿಸಲಾಗುತ್ತದೆ. 25 ಕಥೆಗಳ ಪೈಕಿ ಬಹುಮಾನ ಪಡೆಯದೇ ಉಳಿಯುವ 17 ಕಥೆಗಳಿಗೆ ತಲಾ 2000 ರೂಪಾಯಿ ಗೌರವಧನ ನೀಡಲಾಗುವುದು. ಎಲ್ಲಾ 25 ಕಥೆಗಳ ಹಕ್ಕುಸ್ವಾಮ್ಯ ಕಥೆಗಾರರು ಮತ್ತು ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಇಬ್ಬರಿಗೂ ಜಂಟಿಯಾಗಿ (ಶೇಕಡಾ 50) ಸೇರಿರುತ್ತದೆ.
14.
ಅಂತಿಮ ಸುತ್ತಿಗೆ ಆಯ್ಕೆಯಾದ ಕಥೆಗಾರರು ಬಹುಮಾನ ವಿತರಣಾ ಸಮಾರಂಭದಲ್ಲಿ ತಪ್ಪದೇ ಭಾಗವಹಿಸಬೇಕು.
15.
ಒಬ್ಬರು ಒಂದು ಕಥೆಯನ್ನು ಮಾತ್ರ ಕಳಿಸಬೇಕು. ಕಾದಂಬರಿ ಸ್ಪರ್ಧೆಗೆ ಪುಸ್ತಕ ಕಳುಹಿಸಿದವರೂ ಕೂಡ ಕಥೆಗಳನ್ನು ಕಳುಹಿಸಬಹುದು.
16.
ಕಥೆಗಳನ್ನು -ಮೇಲ್ ಮೂಲಕ (ನುಡಿ/ಯೂನಿಕೋಡ್ ಫಾಂಟ್ ಬಳಸಿ ಟೈಪ್ ಮಾಡಿದ ಪ್ರತಿ) bbks2024@bookbrahma.com ಅಥವಾ ಹಸ್ತಪ್ರತಿಯನ್ನು ಪ್ರಧಾನ ಸಂಪಾದಕರು, ಬುಕ್ ಬ್ರಹ್ಮ ಕನ್ನಡ ಮೂರನೇ ಮಹಡಿ, ಆರ್.ಕೆ ಕಾಂಪ್ಲೆಕ್ಸ್ ಕೆಎಸ್ಎಸ್ಐಡಿಸಿ ಆವರಣ ಎಲೆಕ್ಟ್ರಾನಿಕ್ಸ್ ಸಿಟಿ ಮೊದಲ ಹಂತ, ಬೆಂಗಳೂರು-560100 ಕ್ಕೆ ಕಳುಹಿಸಿಕೊಡಬಹುದು.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 78926 08118

ಅರ್ಜುನ V/s ಏಕಲವ್ಯ

ಅರ್ಜುನ V/s ಏಕಲವ್ಯ ಅರಿವೆಂಬ ಗುರುವನ್ನು ಮೊದಲು ಅರಿತವನು ಬಹುಶಃ ‘ಏಕಲವ್ಯ’ನೇ ಇರಬೇಕು. ಹೌದು, ನಮ್ಮ ಮಹಾಕಾವ್ಯಗಳಲ್ಲೊಂದಾದ ಮಹಾಭಾರತದ ಏಕಲವ್ಯ! ನಿಮಗೆಲ್ಲಾ ಈತನ ಬಗ್ಗ...